31 ಮೇ 2023‌ ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು

ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಆಕಾಡೆಮಿ ಹೈಸ್ಕೂಲ್ ಕುತ್ಯಾರು ಕಾಪು ತಾಲೂಕು ಇದರ “ಶಾಲಾ ಪ್ರಾರಂಭೋತ್ಸವ” ಕಾರ್ಯಕ್ರಮದಲ್ಲಿ ಇಂದು ದಿನಾಂಕ 31-05-2023 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು, ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಟಿ.ಪಿ.ಸಿ ವಿಭಾಗ) ಉಡುಪಿ ಜಿಲ್ಲೆ ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ, ಪುರಸಭೆ ಕಾಪು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 31-05-2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪುವಿನಲ್ಲಿ ನಡೆದ “ವಿಶ್ವ ತಂಬಾಕು ರಹಿತ ದಿನಾಚರಣೆ – 2023” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು.


ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಇಂದು ದಿನಾಂಕ 31-05-2023 ರಂದು ಕುತ್ಯಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ್ಯ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಉಪಾಧ್ಯಕ್ಷರಾದ ದೇವರಾಜ್ ಹಾಗೂ ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.


ಬಿಜೆಪಿ ಮಹಾಶಕ್ತಿ ಕೇಂದ್ರ ಪಡುಬಿದ್ರಿ ಇದರ ವತಿಯಿಂದ ಇಂದು ದಿನಾಂಕ 31-05-2023 ರಂದು ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಧಾರ್ಮಿಕ ಮುಖಂಡರಾದ ಗುಣಕರ್ ಶೆಟ್ಟಿ, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೇಶವ ಮೋಯ್ಲಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.