ಪತ್ರಿಕಾಗೋಷ್ಠಿ
ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ 9 ವರ್ಷ ಪೂರೈಸಿದ್ದು ಆ ಪ್ರಯುಕ್ತ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ದಿನಾಂಕ 03-06-2023 ರಂದು ಓಶಿಯನ್ ಪರ್ಲ್ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳೊಂದಿಗೆ ಸಭೆ
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿನಾಂಕ 03-06-2023 ರಂದು ಶಾಸಕರ ಕಚೇರಿ ಉಡುಪಿಯಲ್ಲಿ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ರೋಗಿಗಳಿಗೆ ಸದ್ರಿ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಸಹಕಾರ ಹಾಗೂ ಸಲಹೆಗಳನ್ನು ವೈದ್ಯಾಧಿಕಾರಿಗಳು ನೀಡಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ವೈದ್ಯಾಧಿಕಾರಿಯವರು ಸ್ಥಳೀಯ ಸಾರ್ವಜನಿಕರ ಹಾಗೂ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಔಷಧೋಪಚಾರವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಸೂಚಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ತಾಲ್ಲೂಕು ವೈದ್ಯಾಧಿಕಾರಿಗಳಾದ ವಾಸುದೇವ್ ಉಡುಪ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.