9 ಜೂನ್ 2023‌ ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು

ಪಲಿಮಾರು ಗ್ರಾಮ ಪಂಚಾಯತ್ ವತಿಯಿಂದ ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನೆ

ಕಾಪು ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಪಲಿಮಾರು ಗ್ರಾಮ ಪಂಚಾಯತ್ ವತಿಯಿಂದ ದಿನಾಂಕ 09-06-2023 ರಂದು ಪಲಿಮಾರು ಗ್ರಾಮ ಪಂಚಾಯತ್­ನ ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಅಭಿನಂದನಾ ಸಮಾರಂಭ ನೆರವೇರಿತು.

ಸಭೆಯಲ್ಲಿ ಶಾಸಕರು ಸಭಾ ಭವನದ ನಾಮ ಫಲಕವನ್ನು ಅನಾವರಣ ಗೊಳಿಸಿ ಬಳಿಕ ಪಂಚಾಯತ್ ನ 5 ಶೇಕಡ ನಿಧಿಯಿಂದ ವಿಕಲಚೇತನರ ಕಲ್ಯಾಣ ನಿಧಿಯ ಸವಲತ್ತು ವಿತರಣೆ ಹಾಗೂ 25 ಶೇಕಡಾ ಪರಿಶಿಷ್ಟ ಜಾತಿ ಮೀಸಲು ನಿಧಿಯಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ಲ್ಯಾಪ್ ಟಾಪ್ ವಿತರಣೆ ಮಾಡಿ ಮನೆ ರಿಪೇರಿಯ ಸಹಾಯಧನದ ಚಕ್ಕನ್ನು ವಿತರಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಶಾಸಕರು ಸಮಸ್ಯೆಗಳಿಗೆ ತುರ್ತು ಸ್ಪಂದನೆ ನೀಡಿ ಸೂಕ್ತ ಪರಿಹಾರ ನೀಡಬೇಕೆಂದು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಉಪಾಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ ಪಡುಬಿದ್ರಿ, ಉಪ ವಲಯ ಅರಣ್ಯಾಧಿಕಾರಿಗಳಾದ ಜೀವನ್ ಶೆಟ್ಟಿ, ಪಡುಬಿದ್ರಿ ಸಹಾಯಕ ಪೋಲಿಸ್ ಉಪ ನಿರೀಕ್ಷಕರಾದ ದಿವಾಕರ್, ಮೆಸ್ಕಾಂ ಅಭಿಯಂತರರಾದ ಹುಸೆನ್, ಆಯುಷ್ ವೈದ್ಯಾಧಿಕಾರಿಗಳಾದ ಪೂರ್ಣಿಮಾ ಪೈ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶಶಿಧರ, ಪ್ರಭಾರಿ ಗ್ರಾಮ ಆಡಳಿತ ಅಧಿಕಾರಿಗಳಾದ ಅರುಣ್ ಹಾಗೂ ಪಲಿಮಾರು ಗ್ರಾಮ ಪಂಚಾಯತ್ ಸರ್ವ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಉಡುಪಿ – ಮಣಿಪಾಲ – ಹಿರಿಯಡಕ – ಪೆರ್ಡೂರು – ಮುಖ್ಯ ರಸ್ತೆ ಕಾಮಗಾರಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪರಿಶೀಲನೆ.

ಉಡುಪಿ – ಮಣಿಪಾಲ – ಪರ್ಕಳ – ಹಿರಿಯಡಕ – ಪೆರ್ಡೂರು ಮುಖ್ಯ ರಸ್ತೆ (ರಾಷ್ಟ್ರೀಯ ಹೆದ್ದಾರಿ 160 A) ಕಾಮಗಾರಿ ಪ್ರಗತಿಯಲ್ಲಿದ್ದು,  ದಿನಾಂಕ 10-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಿರಿಯಡ್ಕ ಭಾಗಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಮಳೆಗಾಲ ಸಮೀತಿಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆ ಆಗದಂತೆ ಮತ್ತು ಸ್ಥಳೀಯರಿಗೆ ಸಮಸ್ಯೆ ಆಗದಂತೆ ಕಾಮಗಾರಿ ನಡೆಸಲು ಸಂಭಂದಿಸಿದ ಇಲಾಖಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಪಂಚಾಯತ್ ಸದಸ್ಯರಾದ ಹರೀಶ್ ಸಾಲಿಯಾನ್, ಶಕ್ತಿ ಕೇಂದ್ರ ಅಧ್ಯಕ್ಷರಾದ ವಿನಯ ಪೂಜಾರಿ, ದಯಾನಂದ್ ಪೂಜಾರಿ, ಶೇಖರ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ದಿನೇಶ್ ಮೆಂಡನ್, ಕೊಡ್ಲಾ ರೋಹಿತ್ ಶೆಟ್ಟಿ, ಬೆಳ್ಳಾರ್ಪಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.