ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ
ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ದಿನಾಂಕ 14-06-2023 ರಂದು ನಡೆದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವಿ ಕುಮಾರ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಕಲ್ಮಾಡಿ, ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಉಸ್ತುವಾರಿ ಸಮನ್ವಯ ಸಮಿತಿ ಸಭೆ (ದಿಶಾ ಮೀಟಿಂಗ್)
ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ದಿನಾಂಕ 14-06-2023 ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಉಸ್ತುವಾರಿ ಸಮನ್ವಯ ಸಮಿತಿ (ದಿಶಾ) ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಇಲಾಖಾ ಮೇಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಸಭೆಯಲ್ಲಿ ಶಾಸಕರು ಮಾತನಾಡಿ ಪಡುಬಿದ್ರಿ ಹಾಗೂ ಹಿರಿಯಡ್ಕ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗುತ್ತಿದ್ದು ವೈಜ್ಞಾನಿಕವಾಗಿ ಕಾಮಗಾರಿಯನ್ನು ತುರ್ತು ನಿರ್ವಹಿಸಬೇಕು ಮತ್ತು ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಭಾಗಗಳಲ್ಲಿ ಕಡಲ ಕೊರೆತ ಉಂಟಾಗುತ್ತಿದ್ದು ಕಡಲ ಕೊರತ ಪೀಡಿತ ಪ್ರದೇಶಗಳ ಸ್ಥಳ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಪ್ರೊಫೆಷನರಿ ಐ.ಎ.ಎಸ್ ಯತೀಶ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಟಪಾಡಿ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ
ಕಾಪು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಕಟಪಾಡಿ ಗ್ರಾಮ ಪಂಚಾಯತ್ ವತಿಯಿಂದ ದಿನಾಂಕ 14-06-2023 ರಂದು ಕಟಪಾಡಿ ಗ್ರಾಮ ಪಂಚಾಯತ್ನ ಅಬ್ಬಕ್ಕ ಹೆಗ್ಗಡ್ತಿ ಸಭಾಭವನದಲ್ಲಿ ಅಭಿನಂದನಾ ಸಮಾರಂಭ ನೆರವೇರಿತು.
ಸಭೆಯಲ್ಲಿ ಶಾಸಕರು ಕೇರಾ ಸುರಕ್ಷಾ ವಿಮಾ ಪತ್ರ ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯಗಳಾದ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಆದೇಶ ಪತ್ರವನ್ನು ವಿತರಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಶಾಸಕರು ಮಾತನಾಡಿ ಜನ ನನ್ನ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿ ನನ್ನನ್ನು ಗೆಲ್ಲಿಸಿದ್ದಾರೆ. ಅವರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಹೇಳಿದ ಅವರು ಕಟಪಾಡಿ ಗ್ರಾಮ ಪಂಚಾಯತ್ನ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಎಸ್ ಆಚಾರ್ಯ, ಉಪಾಧ್ಯಕ್ಷರಾದ ಅಬುಬಕ್ಕರ್, ಮುರ್ತೇದಾರರ ಸಂಘದ ಅಧ್ಯಕ್ಷರಾದ ಸದಾನಂದ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಮತಾ ಶೆಟ್ಟಿ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.