17 ಜೂನ್ 2023‌ ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು

ಸಮಸ್ತ ಮೀನುಗಾರರ ವತಿಯಿಂದ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಅಭಿನಂದನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಶ್ರೀ ಮಂಕಾಳ ಎಸ್. ವೈದ್ಯ ಅವರಿಗೆ ದಿನಾಂಕ 16-06-2023 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಸಮಸ್ತ ಮೀನುಗಾರರ ವತಿಯಿಂದ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ಶಾಸಕರು ಮಾತನಾಡಿ ಹೆಜಮಾಡಿ ಬಂದರಿನ 60 ಶೇಕಡಾ ಕಾಮಗಾರಿ ಪೂರ್ಣಗೊಂಡಿದ್ದು ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಗೊಳಿಸುವಂತೆ ಮನವಿ ಮಾಡಿದ ಅವರು ಕಡಲ್ಕೊರೆತ ಪ್ರದೇಶಗಳ ಬಗ್ಗೆ ಪ್ರಸ್ತಾಪಿಸಿ ಕಡಲ್ಕೊರೆತ ಬಾದಿತ ಪ್ರದೇಶಗಳಲ್ಲಿ ತಡೆಗೋಡೆ ಹಾಗೂ ಪ್ರತಿಬಂಧಕಗಳನ್ನು ಅಳವಡಿಸುವ ಬಗ್ಗೆ ಮನವಿ ಮಾಡಿದರು.

ಸಚಿವರು ಮಾತನಾಡಿ ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಾಡೋಜ ಡಾll. ಜಿ. ಶಂಕರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಗಣ್ಯರಾದ ಆನಂದ ಸಿ ಕುಂದರ್ ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.


ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಲಯ ಉದ್ಘಾಟನೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಇದರ ಕಾರ್ಯಾಲಯ ಉದ್ಘಾಟನೆಯನ್ನು ದಿನಾಂಕ 17-06-2023 ರಂದು ಶಾಸಕರು, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಮದನ್ ಆರ್ ಪಾಲನ್, ಗಂಗಾಧರ್ ಸುವರ್ಣ, ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಕ್ಷೇತ್ರದ ಪ್ರಧಾನ ಅರ್ಚಕರಾದ ವೇದ ಮೂರ್ತಿ ಶ್ರೀನಿವಾಸ ತಂತ್ರಿ ಹಾಗೂ ಬಾಬು ಮಲ್ಲಾರ್, ರಾಧರಮಣ ಶಾಸ್ತ್ರಿ, ಪ್ರಶಾಂತ್ ಶೆಟ್ಟಿ ಕುಂದಾಪುರ ಉಪಸ್ಥಿತರಿದ್ದರು.


ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ

ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿನಾಂಕ 17-06-2023 ರಂದು ಭೇಟಿ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಗಳ ಬಗ್ಗೆ ಹಾಗೂ ಇತರೆ ಕುಂದು ಕೊರತೆಯ ಬಗ್ಗೆ ಚರ್ಚಿಸಿ ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಕಾಳಜಿ ವಹಿಸಿ ಮತ್ತು ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಾಗಲಿರುವುದರಿಂದ ಈ ಬಗ್ಗೆ ಸೂಕ್ತ ಮುಂಜಾಗ್ರತ ಕ್ರಮ ವಹಿಸುವಂತೆ ವೈದ್ಯಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾದ ದೇವದಾಸ್ ನಾಯಕ್, ಪ್ರವೀಣ್ ಪೂಜಾರಿ, ರಾಜೇಶ್ ಶೆಟ್ಟಿ, ಅನುಸೂಯ ಪೂಜಾರಿ, ಮಮತಾ ಶೆಟ್ಟಿ, ಶಾಲಿನಿ ಪೂಜಾರಿ, ಶಿರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಸುಶಾಂತ್ ಶೆಟ್ಟಿ ಕುತ್ಯಾರು, ಶಕ್ತಿಕೇಂದ್ರದ ಸಂತೋಷ್ ಶೆಟ್ಟಿ, ರವೀಂದ್ರ ಪಾಟ್ಕರ್, ಗಿರಿಧರ್ ಪ್ರಭು ಹಾಗೂ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಸುಬ್ರಹ್ಮಣ್ಯ ರಾವ್, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ ಡಾ. ರಕ್ಷಿತಾ ಶೆಣೈ, ದಂತ ವೈದ್ಯಾಧಿಕಾರಿಗಳಾದ ಡಾ. ಗಾಯತ್ರಿ ಉಪಸ್ಥಿತರಿದ್ದರು.


ಅನಂತ ನಮನಮ್ ಕಾರ್ಯಕ್ರಮ

ಕೀರ್ತಿಶೇಷ ಜ್ಯೋತಿರ್ನಿಧಿ ಬೈಲೂರು ಶ್ರೀ ಅನಂತಪದ್ಮನಾಭ ತಂತ್ರಿಗಳ ಜನ್ಮಶತಮಾನೋತ್ಸವ ಅಂಗವಾಗಿ ಇಂದು ದಿನಾಂಕ 17-06-2023 ರಂದು ಶ್ರೀಕೃಷ್ಣ ಮಠದ ಸಂಸ್ಕೃತ ಕಾಲೇಜಿನಲ್ಲಿ ಆಯೋಜಿಸಿದ “ಅನಂತ ನಮನಮ್” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾll. ಡಿ. ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಸಂಸ್ಕೃತ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಶ್ರೀ ಸತ್ಯನಾರಾಯಣ ಆಚಾರ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು.