ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಕ್ಯವನ ಪರಿಕಾದಲ್ಲಿ 9 ನೇ ವಿಶ್ವ ಯೋಗ ದಿನಾಚರಣೆ
ಪೂಜ್ಯ ಪದ್ಮವಿಭೂಷಣ ಡಾl ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಆಶೀರ್ವಾದದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಕ್ಯವನ ಪರಿಕಾ ಪರ್ಕಳದಲ್ಲಿ ದಿನಾಂಕ 21-06-2023 ರಂದು ಆಯೋಜಿಸಲಾದ “9ನೇ ವಿಶ್ವ ಯೋಗ ದಿನಾಚರಣೆ” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ ಭಾರತದ ಪಾರಂಪರಿಕ ಕಲೆಯಾದ ಯೋಗ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲ್ಪಡುತ್ತಿದೆ ಜೊತೆಗೆ ಭಾರತದತ್ತ ವಿಶ್ವವೇ ಮುಖ ಮಾಡುತ್ತಿದೆ. ಇದಕ್ಕೆ ಕಾರಣಿಕರ್ತರಾದ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದು ಹೇಳಿದ ಅವರು ದಿನಂಪ್ರತಿ ಯೋಗ ಮಾಡುವ ಮೂಲಕ ಆರೋಗ್ಯವಂತರಾಗಿರೋಣ ಎಂದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಶ್ರೀ ಧರ್ಮಸ್ಥಳ ಶಾಂತಿವನ ಟ್ರಸ್ಟ್ (ರಿ.) ಕಾರ್ಯದರ್ಶಿಗಳಾದ ಬಿ. ಸೀತಾರಾಮ್ ತೋಳ್ಪಡಿತ್ತಾಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಕ್ಯವನದ ಮುಖ್ಯ ವೈದ್ಯಕೀಯ ಅಧಿಕಾರಿಗಳಾದ ಗೋಪಾಲ್ ಪೂಜಾರಿ, ರೆಸಿಡೆಂಟಲ್ ವೈದ್ಯಕೀಯ ಅಧಿಕಾರಿಗಳಾದ ಶೋಭಿತ್ ಶೆಟ್ಟಿ ಉಪಸ್ಥಿತರಿದ್ದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ
ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಜಿಲ್ಲೆ ಮತ್ತು ತಾಲ್ಲೂಕು ಇದರ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ದಿನಾಂಕ 22-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ವಿದ್ಯಾರ್ಥಿ ಒಕ್ಕೂಟದ ಉದ್ಘಾಟನೆ ನೆರವೇರಿಸಿದ ಶಾಸಕರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಪರ್ಕಳ ರೋಟರಿ ಕ್ಲಬ್ ಅಧ್ಯಕ್ಷರಾದ ದಿನೇಶ್ ಹೆಗ್ಡೆ ಆತ್ರಾಡಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ಬಿ.ಎಲ್ ವಿಶ್ವಾಸ್, ಸಂಚಾಲಕರಾದ ಎನ್.ಎಸ್ ಶೆಟ್ಟಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಸಾಲಿಯಾನ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷರಾದ ಅಮರನಾಥ ಶೆಟ್ಟಿ, ಪ್ರಾಂಶುಪಾಲರಾದ ಮಂಜುನಾಥ ಭಟ್, ಉಪನ್ಯಾಸಕರಾದ ದೇವದಾಸ್ ಪ್ರಭು, ಜಯಶ್ರೀ, ವಿದ್ಯಾರ್ಥಿ ನಾಯಕ ಬಸನ ಗೌಡ, ವಿದ್ಯಾರ್ಥಿ ನಾಯಕಿ ಜೆ.ಎಸ್ ಸಮೀಕ್ಷಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.