30 ಜೂನ್ 2023‌ ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು

ಕೊರಂಗ್ರಪಾಡಿ ವಸತಿ ನಿವೇಶನದಲ್ಲಿ ವನಮಹೋತ್ಸವ ಕಾರ್ಯಕ್ರಮ  

ಕರ್ನಾಟಕ ಅರಣ್ಯ ಇಲಾಖೆ ಉಡುಪಿ ವಲಯ ಕುಂದಾಪುರ ವಿಭಾಗ, ಕರ್ನಾಟಕ ಗೃಹ ಮಂಡಳಿ, ಉಡುಪಿ, ತ್ರಿಷಾ ಕಾಲೇಜು, ಕಟಪಾಡಿ ಇವರ ಸಹಯೋಗದೊಂದಿಗೆ ದಿನಾಂಕ 30-06-2023 ರಂದು ಕರ್ನಾಟಕ ಗೃಹ ಮಂಡಳಿ ವಸತಿ ನಿವೇಶನ ಕೊರಂಗ್ರಪಾಡಿಯಲ್ಲಿ ಆಯೋಜಿಸಿದ “ವನಮಹೋತ್ಸವ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪಾ, ಸದಸ್ಯರಾದ ಲಿವಿತಾ ದೇಸಿ, ಅಮೃತಾ ಪೂಜಾರಿ, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಹನಾ, ಸಹಾಯಕ ಅಭಿಯಂತರರಾದ ಹರೀಶ್, ಉಡುಪಿ ವಲಯ ಅರಣ್ಯಾಧಿಕಾರಿಗಳಾದ ಸುಬ್ರಮಣ್ಯ ಆಚಾರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಜೀವನ್ ದಾಸ್ ಶೆಟ್ಟಿ, ಗುರುರಾಜ್ ಕೆ, ತ್ರಿಶಾ ಕಾಲೇಜಿನ ಉಪನ್ಯಾಸಕರಾದ ಚೇತನಾ ಸುನಿಲ್, ಧೀರಜ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಹಿರಿಯಡಕ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭ

ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಹಿರಿಯಡಕ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭ  ದಿನಾಂಕ 30-06-2023 ರಂದು ನಡೆಯಿತು.

ಶಾಸಕರು ಅಂಜಾರು, ಮರ್ಣೆ, ಮಣಿಪುರ, ಬೊಮ್ಮರಬೆಟ್ಟು ಗ್ರಾಮದ ಒಟ್ಟು 17 ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿ.ಸಿ ಅಡಿ ಹಕ್ಕುಪತ್ರ ವಿತರಿಸಿ ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನದ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಿದ ಅವರು ವಾರದಲ್ಲಿ ಪ್ರತಿ ಸೋಮವಾರ ಹಿರಿಯಡಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ರಾಷ್ಟ್ರೀಯ ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯರಾದ ಶ್ಯಾಮಲ ಕುಂದರ್, ಜಿಲ್ಲಾ ಪಂಚಾಯತ್ ನಿಕಟ ಪೂರ್ವ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಹಿರಿಯರು, ಮುಖಂಡರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.


ಕೊಡಿಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕಾಪು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಕೊಡಿಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ  ದಿನಾಂಕ 30-06-2023 ರಂದು ಕೊಡಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಅಭಿನಂದನಾ ಸಮಾರಂಭ ನೆರವೇರಿತು.

ಈ ಸಂದರ್ಭದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾ ಶೆಟ್ಟಿ, ಉಪಾಧ್ಯಕ್ಷರಾದ ಸದಾನಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಉಮೇಶ್, ಗ್ರಾಮ ಲೆಕ್ಕಾಧಿಕಾರಿಗಳಾದ ಗಜೇಂದ್ರ ಹಾಗೂ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.