ಹಿರಿಯಡಕ ಕಾಲೇಜು ವಾರ್ಷಿಕೋತ್ಸವ
ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ “ಕಾಲೇಜು ವಾರ್ಷಿಕೋತ್ಸವ – 2022-23” ಸಮಾರಂಭದಲ್ಲಿ ದಿನಾಂಕ 08-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಪು ಕಾಲೇಜು ವಾರ್ಷಿಕೋತ್ಸವ
ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕಾಪು ಇದರ “ಕಾಲೇಜು ವಾರ್ಷಿಕೋತ್ಸವ – 2023” ಸಮಾರಂಭದಲ್ಲಿ ದಿನಾಂಕ 08-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮಳೆಹಾನಿಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ಕಾರ್ಯಪಡೆಯೊಂದಿಗೆ ಸಭೆ
ಉಡುಪಿ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಇದರಿಂದ ಅನೇಕ ಆಸ್ತಿ ಪಾಸ್ತಿ ಹಾಗೂ ಜೀವ ಹಾನಿ ಉಂಟಾಗಿದ್ದು, ಈ ಬಗ್ಗೆ ಪರಿಹಾರ ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 08-07-2023 ರಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ಕಾರ್ಯಪಡೆಯೊಂದಿಗೆ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ಕಾಪು ವಿಧಾನಸಭಾ ಕ್ಷೇತ್ರದ ಬಹುತೇಕ ಪ್ರದೇಶವು ಕರಾವಳಿ ತೀರಕ್ಕೆ ಹೊಂದಿಕೊಂಡಿರುವ ಪ್ರದೇಶವಾಗಿರುತ್ತದೆ. ಅದರಲ್ಲಿ ಉಳಿಯಾರಗೋಳಿ, ಕಾಪು, ಪೊಲಿಪು, ಮೂಳೂರು, ಪಡು, ತೊಟ್ಟಂ, ಪಡುಬಿದ್ರಿ, ನಡಿಪಟ್ನ, ಹೆಜಮಾಡಿ, ಮುಂತಾದ ಪ್ರದೇಶಗಳಲ್ಲಿ ಕಡಲ್ಕೊರೆತ ಉಂಟಾಗಿದ್ದು, ಅಪಾರ ಆಸ್ತಿ ಪಾಸ್ತಿ ನಷ್ಟ ಉಂಟಾಗಿರುತ್ತದೆ. ಸದ್ರಿ ಭಾಗದಲ್ಲಿ ಕಡಲ್ಕೂರೆತವನ್ನು ತಡೆಗಟ್ಟಲು ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಮತ್ತು ವಿಪರೀತ ಅತೀವೃಷ್ಠಿಯ ಪರಿಣಾಮ ವಾಸ್ತವ್ಯದ ಮನೆಗಳು ಹಾನಿಗೀಡಾಗಿದ್ದು, ಹಿಂದಿನಂತೆಯೇ ಗ್ರಾಮಾಡಳಿತ ಅಧಿಕಾರಿಯ ವರದಿಯಂತೆ ಹಾನಿಗೀಡಾದ ವಾಸ್ತವ್ಯದ ಮನೆಯ ದುರಸ್ಥಿ ಹಾಗೂ ಪುನರ್ ನಿರ್ಮಾಣಕ್ಕೆ ಮುಖ್ಯ ಮಂತ್ರಿ ವಿಪತ್ತು ಪರಿಹಾರ ನಿಧಿಯಿಂದ ಎ,ಬಿ,ಸಿ ಕೆಟಗರಿಯಂತೆ ಪರಿಹಾರಧನ ಮಂಜೂರು ಮಾಡಲು ಕ್ರಮವಹಿಸಬೇಕು. ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಸ್ವತ್ತು ಹಾನಿ, ಜೀವಕ್ಕೆ ಹಾನಿಯಾದಂತ ಸಂದರ್ಭದಲ್ಲಿ ತುರ್ತು ಪರಿಹಾರ ಒದಗಿಸಲು ಜಿಲ್ಲಾಡಳಿತಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ನೆರೆ ಪೀಡಿತ ಪ್ರದೇಶಗಳೆಂದು ಈಗಾಗಲೇ ಗುರುತಿಸಿದ ಭಾಗದಲ್ಲಿ ಅತೀವೃಷ್ಟಿ ಹಾಗೂ ಪ್ರವಾಹದ ಸಮಯದಲ್ಲಿ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ಹಾಗೂ ಪ್ರತಿ ಗ್ರಾಮದಲ್ಲಿಯೂ ಗಂಜಿ ಕೇಂದ್ರವನ್ನು ಗುರುತಿಸಿ, ತೆರೆಯುವಲ್ಲಿ ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿಗಳಾದ ವೀಣಾ, ಸಹಾಯಕ ಆಯುಕ್ತರಾದ ರಶ್ಮಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.