ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ವತಿಯಿಂದ ಶಾಸಕರಿಗೆ ಅಭಿನಂದನೆ
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ವತಿಯಿಂದ ದಿನಾಂಕ 22-07-2023 ರಂದು ಕಾಪು ಪುರಸಭೆಯ ಸಭಾಂಗಣದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಭಿನಂದನಾ ಸಮಾರಂಭ ನೆರವೇರಿತು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕರು ನಮ್ಮ ಸಮಾಜದಲ್ಲಿ ಅತಿ ಹಿಂದುಳಿದ ಸಮುದಾಯದಲ್ಲಿ ಕೊರಗ ಸಮುದಾಯವು ಒಂದು. ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ ಯಾರೂ ಕನಿಷ್ಟರಲ್ಲ. ಕೊರಗ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಿ ಅವರನ್ನು ಉತ್ತಮ ವ್ಯಕ್ತಿಯನ್ನಾಗಿ ರೂಪಿಸಬೇಕು. ಕೊರಗ ಸಮುದಾಯದವರು ಮುಖ್ಯ ವಾಹಿನಿಗೆ ಬರಬೇಕು ಎಂದು ಹೇಳಿದ ಅವರು ಕೊರಗ ಸಮುದಾಯದವರ ಏಳಿಗೆಗೆ ಶ್ರಮಿಸಲು ನಾನು ಬದ್ಧ ಎಂದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಕಾಪು ಕೊರಗ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಮಾ, ಕೊರಗ ಒಕ್ಕೂಟದ ಪ್ರತಿನಿಧಿಯಾದ ವಿನಯ ಅಡ್ವೆ, ಕೊರಗ ಜಿಲ್ಲಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರಾದ ಬೊಗ್ರ ಕೊರಗ, ಸಮಗ್ರ ಗ್ರಾಮೀಣ ಆಶ್ರಮದ ಕಾರ್ಯಕರ್ತ ಅಶೋಕ ಶೆಟ್ಟಿ ಉಪಸ್ಥಿತರಿದ್ದರು.
ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದಾನಿಗಳಿಂದ ಉಚಿತ ಸಮವಸ್ತ್ರ, ಪುಸ್ತಕ – ವಿತರಣೆ
ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದಾನಿಗಳಿಂದ ಕೊಡಮಾಡಿದ ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ದಿನಾಂಕ 22-07-2023 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಉದ್ಘಾಟಿಸಿ ಸಾಂಕೇತಿಕವಾಗಿ ವಿಧ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ ಮಾಡಿ ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಇಂಡಿಯನ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ರಿಜನ್ ಅಧ್ಯಕ್ಷರಾದ ಅಲ್ವಿನ್ ಮೆನೇಜಸ್, ಇಂಡಿಯನ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ರಿಜನ್ ರಾಷ್ಟ್ರೀಯ ಉಪಾಧ್ಯಕ್ಷರಾದ ನವೀನ್ ಅಮೀನ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ವಿಜಯ್ ಕುಮಾರ್, ಸದಸ್ಯರಾದ ಪ್ರತಾಪ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ಸಂತೋಷ್ ಸುವರ್ಣ ಬೊಳ್ಜೆ, ಕಾಲೇಜು ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಮೂಕಾಂಬಿಕಾ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಗುರುಪ್ರಸಾದ್ ಹಾಗೂ ಉಪನ್ಯಾಸಕರು, ಶಿಕ್ಷಕರು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗಾಳಿ ಮಳೆಗೆ ಕಟಪಾಡಿ ಮಾರುಕಟ್ಟೆ ಬಳಿ ಧರೆಗುರುಳಿದ ಮರ ತಕ್ಷಣ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮರ ತೆರವುಗೊಳಿಸಿದ ಶಾಸಕರು
ಭಾರಿ ಗಾಳಿ ಮಳೆಗೆ ಕಟಪಾಡಿ ಶಿರ್ವ ಮುಖ್ಯ ರಸ್ತೆಯ ಕಟಪಾಡಿ ಮಾರುಕಟ್ಟೆ ಬಳಿ ಮರ ಧರೆಗುರುಳಿದ್ದು, ಸ್ಥಳೀಯರು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಗಮನಕ್ಕೆ ತಂದ ತಕ್ಷಣ ಶಾಸಕರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮರ ತೆರವು ಗೊಳಿಸಿದರು.
ಅನೇಕ ಕಡೆಗಳಲ್ಲಿ ಇಂತಹ ಅಪಾಯಕಾರಿ ಮರಗಳಿದ್ದು ಅವುಗಳನ್ನು ಶೀಘ್ರದಲ್ಲಿ ತೆರವುಗೊಳಿಸುವಂತೆ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚಿಸಿದರು.