ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ದಿನಾಂಕ 30-09-2024 ರಂದು ಶ್ರೀ ಅರ್ ಎನ್ ಶೆಟ್ಟಿ ಸಭಾ ಭವನ, ಬಂಟರ ಸಂಘ ಹುಬ್ಬಳ್ಳಿ ಇಲ್ಲಿ ನಡೆದ (ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ) ಸಮಿತಿ ರಚನಾ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಶಾಸಕರು, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನವದುರ್ಗಾ ಲೇಖನ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ಕೆ.ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್, ಪ್ರಚಾರ ಸಮಿತಿ ಸಂಚಾಲಕರಾದ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ನವದುರ್ಗ ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಬಾಲಾಜಿ, ಕೋಶಾಧಿಕಾರಿ ಕೆ ವಿಶ್ವನಾಥ್,ಸಂಚಾಲಕರಾದ ಸುವರ್ಧನ್ ನಾಯಕ್, ಕಾಪು ವಿಧಾನಸಭಾ ಕ್ಷೇತ್ರ ಗ್ರಾಮ ಸಮಿತಿ ಪ್ರಧಾನ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು, ಹುಬ್ಬಳ್ಳಿ ಬಂಟರ ಸಂಘದ ಅಧ್ಯಕ್ಷರಾದ ಮಹೇಶ್ ಶೆಟ್ಟಿ, ಉದ್ಯಮಿಗಳಾದ ಸುಗ್ಗಿ ಸುಧಾಕರ್ ಶೆಟ್ಟಿ, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸಮಿತಿ ಸದ್ಯಸರು ಉಪಸ್ಥಿತರಿದ್ದರು.