ಬಿಜೆಪಿ ಸದಸ್ಯತ್ವ ನೋಂದಣಿ ಕುರಿತು ಕಾಪು ಮಹಾಶಕ್ತಿ ಕೇಂದ್ರದ ಸಭೆ

ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು ಕಾಪು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಸಭೆ ದಿನಾಂಕ 04-10-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಕಾಪು ಕ್ಷೇತ್ರದಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಕನಿಷ್ಠ 300 ಸದಸ್ಯತ್ವ ನೋಂದಣಿ ಮಾಡಬೇಕು ಮತ್ತು ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರದಿಂದ ಗರಿಷ್ಠ ಸದಸ್ಯತ್ವ ನೋಂದಣಿ ಮಾಡಲು ನಾವೆಲ್ಲರೂ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ ಕಲ್ಯಾ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಶೈಲೇಶ್ ಹಾಗೂ ಪುರಸಭೆ ಸದಸ್ಯರು, ಪಕ್ಷದ ಹಿರಿಯರು ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.