ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಖಂಡಿಸಿ ಪ್ರತಿಭಟನೆ

ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿ ಕಬಳಿಕೆ ಮಾಡುತ್ತಿರುವ ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಪು ಮಂಡಲ ಬಿಜೆಪಿ ವತಿಯಿಂದ‌ ದಿನಾಂಕ 06-11-2024 ರಂದು ನಡೆದ “ಬೃಹತ್ ಪ್ರತಿಭಟನೆ”ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಕಾಪು ಪೇಟೆಯಿಂದ ಕಾಪು ತಾಲೂಕು ಆಡಳಿತ ಸೌಧದದವೆರೆಗೆ ಕಾಲ್ನಡಿಗೆ ಮೂಲಕ ಸಾಗಿ ಬಂದು ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದಿ ಖಂಡಿಸಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಉಪತಹಸಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.