ಶಾಸಕರಾದ ಶ್ರೀಯುತ ಗುರ್ಮೆ ಸುರೇಶ್ ಶೆಟ್ಟಿಯವರು ಕುತ್ಯಾರು ವಿದ್ಯಾದಾಯಿನಿ ಶಾಲೆಯಲ್ಲಿ ನಡೆದ ಕುತ್ಯಾರು ಸಾಯಿನಾಥ ಶೆಟ್ಟಿಯವರ ನೇತೃತ್ವದ ಸಾಯಿ ಕ್ರಿಯೇಷನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 198 ಪಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡರು.
ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರು ಲತಾ ಆಚಾರ್ಯ, ಸಾಯಿ ಕ್ರಿಯೇಷನ್ ಪ್ರವರ್ತಕರು ಸಾಯಿನಾಥ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಶರ್ಮಿಳಾ, ಸ್ಥಳೀಯ ಪ್ರಮುಖರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಪ್ರಸಾದ್ ಕುತ್ಯಾರು ಹಾಗೂ ಇನ್ನಿತರರು, ಪಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಶಿರ್ವ ವಿದ್ಯಾವರ್ಧಕ ಸಂಘ (ರಿ) ರವರ ಸಮೂಹ ಸಂಸ್ಥೆಗಳ ವತಿಯಿಂದ ನೂತನವಾಗಿ ಕಾಪು ಕ್ಷೇತ್ರದ ಶಾಸಕರಾಗಿ ಬಹುಮತದಿಂದ ಚುನಾಯಿತರಾದ ನಿಟ್ಟಿನಲ್ಲಿ ಆಯೋಜಿಸಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀಯುತ ಗುರ್ಮೆ ಸುರೇಶ್ ಶೆಟ್ಟಿಯವರು ಸನ್ಮಾನವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಸುಬ್ಬಯ್ಯ ಹೆಗ್ಡೆ, ಸಂಸ್ಥೆಯ ಆಡಳಿತ ಅಧಿಕಾರಿ ಡಾ! ವೈ ಭಾಸ್ಕರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷರು ಮಟ್ಟಾರ್ ರತ್ನಾಕರ್ ಹೆಗ್ಡೆ, ವಿದ್ಯಾವರ್ಧಕ ಸಂಘದ ಟ್ರಸ್ಟಿಗಳಾದ ಜಗದೀಶ್ ಅರಸ, ಎಂ.ಎಸ್.ಆರ್.ಎಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ನಯನ ಪಕ್ಕಳ ಹಾಗೂ ಕಾಲೇಜಿನ ಭೋದಕ ಮತ್ತು ಬೋಧಕೀತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಪು ಕಾರ್ಯನಿರತ ಪತ್ರಕರ್ತರ ಸಂಘ ಇದರ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಕುಟುಂಬ ಸಮ್ಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗಿಯಾದರು.
ಈ ಸಂದರ್ಭದಲ್ಲಿ ಯು ಪಿ ಸಿ ಎಲ್, ಅದಾನಿ ಗ್ರೂಪ್ ಕಾರ್ಯ ನಿರ್ವಾಹಕ ನಿರ್ದೇಶಕರು ಕಿಶೋರ್ ಆಳ್ವ, ಆಡಳಿತ ನಿರ್ದೇಶಕರು ಝಿಯಾನ್ ಕನ್ಸ್ಟ್ರಕ್ಷನ್ ಪ್ರೈ. ಲಿ ಗುಲಾಂ ಮೊಹಮ್ಮದ್,ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುರೇಶ್ ಎರ್ಮಳ್, ಉಪಾಧ್ಯಕ್ಷರಾದ ಹರೀಶ್ ಕಟಪಾಡಿ, ಕಾರ್ಯದರ್ಶಿಯಾದ ಪುಂಡಲೀಕ ಮರಾಠೆ, ಕೋಶಾಧಿಕಾರಿಯಾದ ಅಬ್ದುಲ್ ಹಮೀದ್, ಕ್ರೀಡಾ ಕಾರ್ಯದರ್ಶಿಯಾದ ಸಂತೋಷ್ ಕಾಪು ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.