ಕಾಪು ತಾಲೂಕು ಎಲ್ಲೂರು ಗ್ರಾಮದಲ್ಲಿ ಗೋ ರುದ್ರಭೂಮಿ ನಿರ್ಮಾಣ – ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ
ಕಾಪು ತಾಲೂಕು ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನನ್ನು ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಿಸಲಾಗಿದ್ದು, ಇಂದು ದಿನಾಂಕ 02-06-2023 ರಂದು ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಚಾಲನೆ ನೀಡಿದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ ಯೋಜನೆ ಇಂದು ನನಸಾಗುತ್ತಿದೆ.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಎಲ್ಲರೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಜಯಂತ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೇಶವ ಮೋಯ್ಲಿ, ಕಾಪು ತಹಶೀಲ್ದಾರರಾದ ಶ್ರೀನಿವಾಸ ಕುಲಕರ್ಣಿ, ಕಂದಾಯ ನಿರೀಕ್ಷಕರಾದ ಸುಧೀರ್ ಶೆಟ್ಟಿ, ಕಾಪು ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ. ಅರುಣ್ ಹೆಗ್ಡೆ, ಪಶು ವೈದ್ಯಾಧಿಕಾರಿಗಳಾದ ಡಾ. ವಿಜಯ ಕುಮಾರ್, ಕಾಪು ತಾಲ್ಲೂಕು ಪಂಚಾಯತ್ ಸಹಾಯಕ ಅಭಿಯಂತರರಾದ ಚಂದ್ರಕಲಾ, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರದೀಪ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮದ ನಿರೂಪಿಸಿದರು.