ಕಾಪು ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ತಾತ್ಕಾಲಿಕ ಗುಡಿಗೆ ಸಾನ್ನಿಧ್ಯ ಚಾಲನಾ ಸಮಾರಂಭ – ಧಾರ್ಮಿಕ ಸಭಾ ಕಾರ್ಯಕ್ರಮ
ಕಾಪು ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ತಾತ್ಕಾಲಿಕ ಗುಡಿಗೆ ಸಾನ್ನಿಧ್ಯ ಚಾಲನಾ ಸಮಾರಂಭ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದಿನಾಂಕ 12-06-2023 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರು, ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಜ್ಯೋತಿರ್ವಿವಿದ್ವಾನ್ ಶ್ರೀ ಕೆ.ಜಿ ರಾಘವೇಂದ್ರ ತಂತಿ ಕೊರಂಗ್ರಪಾಡಿ ಆಶೀರ್ವಚಿಸಿ ಜ್ಯೋತಿರ್ವಿವಿದ್ವಾನ್ ಶ್ರೀ ಕೆ.ಪಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ ಶುಭ ಸಂಶನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ,ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮುಂಬೈ ಕಾರ್ಯಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಪುಣೆ ಮಾಧವ ಶೆಟ್ಟಿ, ಮುಂಬೈ ಕೃಷ್ಣ ಪ್ಯಾಲೇಸ್ ಗ್ರೂಪ್ ನ ಕೃಷ್ಣ ಶೆಟ್ಟಿ, ವಿಶ್ವನಾಥ ಕ್ಷೇತ್ರ ಕಟಪಾಡಿ ಕ್ಷೇತ್ರ ಆಡಳಿತ ಮಂಡಳಿ ಅಧ್ಯಕ್ಷರಾದ ಬಿ.ಎನ್ ಶಂಕರ್ ಪೂಜಾರಿ, ಮೊಗವೀರ ಮಹಾಸಭಾ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ವಿಶ್ವ ದೇವಾಡಿಗ ಮಹಾಮಂಡಲ ಅಧ್ಯಕ್ಷರಾದ ಧರ್ಮಪಾಲ ಯು ದೇವಾಡಿಗ, ಉಡುಪಿ ತಿರುಮಲ ಜುವೆಲರ್ಸ್ ನ ಗಂಗಾಧರ ಆಚಾರ್ಯ, ದಕ್ಷಿಣ ಕನ್ನಡ ಪದ್ಮಶಾಲಿ ಮಹಾಸಭಾ ಅಧ್ಯಕ್ಷರಾದ ರಾಮದಾಸ್ ಶೆಟ್ಟಿಗಾರ್, ಶ್ರೀ ಮಾಲ್ತಿದೇವಿ ದೇವಸ್ಥಾನ, ಬಬ್ಬುಸ್ವಾಮಿ ಮೂಲಕ್ಷೇತ್ರ ಕಚ್ಚೂರಿನ ಧರ್ಮದರ್ಶಿಗಳಾದ ಗೋಕುಲ್ ದಾಸ್, ಕೋಟೆ ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ ಮಲ್ಲಾರು, ರಾಣ್ಯಕೇರಿ ಗುರಿಕಾರರಾದ ಜಯ ರಾಣ್ಯ, ಸೂರ್ಯ ಸಾಲಿಯಾನ್ ಮುಂಬೈ, ಪ್ರಭಾಕರ ಶೆಟ್ಟಿ ಮುಂಬೈ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ
2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ದಿನಾಂಕ 12-06-2023 ರಂದು ಹಿಂದೂ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಗೌರವಾರ್ಪಣೆ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ 2022-23 ಸಾಲಿನ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿ ಎಸ್ ಶೆಟ್ಟಿ (594/600), ಮಂಜುಳಾ ಕಾಮತ್ (573/600) ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದ ಇಳಾ ಕೆಳಮನೆ (578/600), ಸಿಧ್ಧೀಶ್ ಎಸ್ ಪ್ರಭು (573-600), ಕಲಾ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದ ಶ್ರಾವ್ಯ ಪ್ರಭು (534/600), ಆರ್ ಶ್ರಾವ್ಯ (533/600) ಹಾಗೂ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸ್ಪೂರ್ತಿ (575/625), ಶ್ರೀಗೌರಿ (562/625) ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾವರ್ಧಕ ಸಂಘ (ರಿ), ಶಿರ್ವದ ಆಡಳಿತಾಧಿಕಾರಿಗಳಾದ ಪ್ರೊ. ವೈ ಭಾಸ್ಕರ್ ಶೆಟ್ಟಿ, ಕಾರ್ಯದರ್ಶಿಗಳಾದ ಸುಬ್ಬಯ್ಯ ಹೆಗ್ಡೆ, ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಭಾಸ್ಕರ ಎ, ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕರಾದ ವಸಂತಿ ಉಪಸ್ಥಿತರಿದ್ದರು.
ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ವತಿಯಿಂದ ಶಾಸರಿಗೆ ಅಭಿನಂದನಾ ಸಮಾರಂಭ
ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ದಿನಾಂಕ 12-06-2023 ರಂದು ಕುಡ್ಲ ಪೆವಿಲಿಯನ್ ಸಭಾಂಗಣದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ಸ್ಥಾಪಕಾಧ್ಯಕ್ಷರಾದ ಕೆ. ಸದಾನಂದ, ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಮೋಹನ್ ಆಳ್ವ, ಡಾ. ಭಾಸ್ಕರ್ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಉದ್ಯಮಿಗಳಾದ ದೇವಾನಂದ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷರಾದ ಸುಚರಿತ ಶೆಟ್ಟಿ, ವೇಣುಗೋಪಾಲ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷರಾದ ವಿಜಯಲಕ್ಷ್ಮಿ ಶೆಟ್ಟಿ, ನಿತೀಶ್ ಶೆಟ್ಟಿ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ಕಾರ್ಯಾಧ್ಯಕ್ಷರಾದ ದೇವಿಚರಣ್ ಶೆಟ್ಟಿ, ರಾಜು ಗೋಪಾಲ್ ರೈ ಹಾಗೂ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ಪದಾಧಿಕಾರಿಗಳು ಉಪಸ್ಥಿತರಿದ್ದರು.