ರೂ. 3 ಕೋಟಿ 75 ಲಕ್ಷ ವೆಚ್ಚದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿ – ಉದ್ಘಾಟನೆ
ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ 3 ಕೋಟಿ 75 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ದಿನಾಂಕ 16-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪಟ್ಟ ಬಳಿಯ ನಡಿದಂಡೆ ಸಂರಕ್ಷಣೆ – 2 ಕೋಟಿ, ಪರಪಟ್ಟ – ನದಿಕುದ್ರು ರಸ್ತೆಯ ಕಾಂಕ್ರೀಟಿಕರಣ – 40 ಲಕ್ಷ, ಗುಂಡಿ ರಸ್ತೆ ಕಾಂಕ್ರೀಟಿಕರಣ – 50 ಲಕ್ಷ, ಕೂಪ್ಪಳ ರಸ್ತೆ ಕಾಂಕ್ರೀಟಿಕರಣ – 40 ಲಕ್ಷ, ಬ್ರಹ್ಮಾಸ್ಥಾನ ರಸ್ತೆ ಕಾಂಕ್ರೀಟಿಕರಣ – 40 ಲಕ್ಷ, ನದಿಕುದ್ರು ಜಾರಂದಾಯ ದೈವಸ್ಥಾನದ ಬಳಿಯ ರಸ್ತೆ ಕಾಂಕ್ರೀಟೀಕರಣ – 5 ಸೇರಿದಂತೆ ಒಟ್ಟು 3 ಕೋಟಿ 75 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಯ ಉದ್ಘಾಟನೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ, ಹೆಜಮಾಡಿ ಪಂಚಾಯತ್ ಸದಸ್ಯರುಗಳಾದ ಶರಣ್ ಕುಮಾರ್ ಮಟ್ಟು, ಪ್ರಸಾದ್ ಹೆಜಮಾಡಿ, ಜನಾರ್ಧನ್ ಹೆಜಮಾಡಿ, ಪ್ರಾಣೇಶ್ ಹೆಜಮಾಡಿ, ಮೋಹನ್ ಸುವರ್ಣ, ಸುಜಾತ, ನಳಿನಿ, ರೇಷ್ಮಾ, ಬಬಿತಾ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಸಚಿನ್ ಜಿ ನಾಯಕ್, ಶಕ್ತಿಕೇಂದ್ರ ಯುವ ಮೋರ್ಚಾದ ಕೀರ್ತನ್ ಪೂಜಾರಿ ಕಾರ್ಯಕರ್ತರಾದ ಚಂದ್ರಹಾಸ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಹೆಜಮಾಡಿ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ
ಕಾಪು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಹೆಜಮಾಡಿ ಗ್ರಾಮ ಪಂಚಾಯತ್ ವತಿಯಿಂದ ದಿನಾಂಕ 16-06-2023 ರಂದು ಹೆಜಮಾಡಿ ಗ್ರಾಮ ಪಂಚಾಯತ್ ನಲ್ಲಿ ಅಭಿನಂದನಾ ಸಮಾರಂಭ ನೆರವೇರಿತು.
ಸಭೆಯಲ್ಲಿ ಶಾಸಕರು ಪಂಚಾಯತ್ ನ 5 ಶೇಕಡ ನಿಧಿಯಿಂದ ವಿಕಲಚೇತನರ ಕಲ್ಯಾಣ ನಿಧಿಯಿಂದ ವೀಲ್ ಚೇರ್ ವಿತರಣೆ ಮಾಡಿ ಸಾಮಾಜಿಕ ಭದ್ರತಾ ಸೌಲಭ್ಯಗಳಾದ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಆದೇಶ ಪತ್ರವನ್ನು ವಿತರಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಶಾಸಕರು ಮಾತನಾಡಿ ಜನಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳು ಸಾರ್ವಜನಿಕರ ದೂರುಗಳ ನಿವಾರಣೆಗೆ ವಿಳಂಬ ಮಾಡದೆ ತಕ್ಷಣದಲ್ಲಿ ಸ್ಪಂದಿಸಬೇಕು. ಹೆಜಮಾಡಿ ಗ್ರಾಮ ಪಂಚಾಯತ್ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ ಕರ್ಕೇರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಹೆಜಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಇನಾಯತ್ ಉಲ್ಲಾ ಹಾಗೂ ಹೆಜಮಾಡಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.