23 ಜೂನ್ 2023‌ ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು

ಬೈರಂಪಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕಾಪು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಬೈರಂಪಳ್ಳಿ ಗ್ರಾಮ ಪಂಚಾಯತ್ ವತಿಯಿಂದ  ದಿನಾಂಕ 23-06-2023 ರಂದು ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಅಭಿನಂದನಾ ಸಮಾರಂಭ ನೆರವೇರಿತು.

ಶಾಸಕರು ಮಾತನಾಡಿ ಜನಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳು ಸಾರ್ವಜನಿಕರ ದೂರುಗಳ ನಿವಾರಣೆಗೆ ವಿಳಂಬ ಮಾಡದೆ ತಕ್ಷಣದಲ್ಲಿ ಸ್ಪಂದಿಸಬೇಕು. ವೃತ್ತಿ ಹಾಗೂ ಪೃವ್ರತಿ ಬೇರೆ ಇರಬಹುದು ಆದರೆ ಈ ಸಮಾಜದ ಕಟ್ಟ ಕಡೆಯ ಜನರಿಗೆ ನಾವು ಧ್ವನಿ ಆಗಬೇಕು ಜೊತೆಗೆ ಸಮಾಜದ ಕಟ್ಟ ಕಡೆಯ ಜನರ ಕಣ್ಣೀರು ವರಿಸುವ ಕಾರ್ಯ ನಮ್ಮಿಂದಾಗಬೇಕು. ಸರಕಾರದ ಮತ್ತು ಸಮಾಜದ ಒಬ್ಬ ಸೇವಕನಾಗಿ, ಪ್ರತಿನಿಧಿಯಾಗಿ ಸೇವೆ ಮಾಡುವಂತಹ ಅವಕಾಶ ನನಗೆ ಭಗವಂತ ನೀಡಿದ್ದಾರೆ. ಹಾಗಾಗಿ ನಾವು ನೀವೆಲ್ಲರೂ ಒಟ್ಟಾಗಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಉಪಾಧ್ಯಕ್ಷರಾದ ಸುಚೇತಾ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ ಶೆಟ್ಟಿ ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ವಿವಿಧ ಇಲಾಖಾ ಅಭಿಯಂತರರೊಂದಿಗೆ ಶಾಸಕರ ಸಭೆ

ವಿವಿಧ ಇಲಾಖೆಗಳ ಅಭಿಯಂತರರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿನಾಂಕ 24-06-2023 ರಂದು ಕಾಪು ಶಾಸಕರ ಕಚೇರಿಯಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ವಿವಿಧ ಅನುಷ್ಠಾನ ಇಲಾಖೆಗಳ ಕಾಮಗಾರಿ ಪ್ರಗತಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕಾಮಗಾರಿಗಳ ನಿರ್ವಹಣೆಯ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಬಂದರು ಮತ್ತು ಮೀನುಗಾರಿಕಾ ಇಲಾಖೆ, ಪಿ.ಆರ್.ಇ.ಡಿ, ಪಿ.ಎಂ.ಜಿ.ಎಸ್.ವೈ, ಕೆ.ಆರ್. ಐ.ಡಿ.ಎಲ್, ನಿರ್ಮಿತಿ ಕೇಂದ್ರ, ವಾರಾಹಿ, ಕಾಪು ಪುರಸಭಾ ವ್ಯಾಪ್ತಿಯ ಅಭಿಯಂತರರು ಉಪಸ್ಥಿತರಿದ್ದರು.


ಹೆಜಮಾಡಿ ಬಂದರಿಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕರ ಭೇಟಿ – ಕಾಮಗಾರಿ ಪರಿಶೀಲನೆ

ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಬಂದರು ಅಭಿವೃದ್ಧಿಗೆ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ರೂ. 181 ಕೋಟಿ ಹಾಗೂ ಭೂ ಸ್ವಾಧೀನಕ್ಕೆ 7 ಕೋಟಿ ಸೇರಿದಂತೆ ಒಟ್ಟು 188 ಕೋಟಿ ರೂಪಾಯಿ ಅನುದಾನ ಮಂಜೂರಾಗಿ 60 ಶೇಖಡಾ ಕಾಮಗಾರಿ ಪೂರ್ಣಗೊಂಡಿದ್ದು, ದಿನಾಂಕ 23-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಬಾಕಿ ಇರುವ ಅನುದಾನದ ಬಿಡುಗಡೆಯ ಬಗ್ಗೆ ಮೀನುಗಾರಿಕಾ ಸಚಿವರಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ, ಉಪಾಧ್ಯಕ್ಷರಾದ ಪವಿತ್ರ ಗಿರೀಶ್, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಾಣೇಶ್ ಹೆಜಮಾಡಿ, ಶರಣ್ ಮಟ್ಟು, ಜಗನ್ನಾಥ್, ನಳಿನಿ, ಸುಜಾತ, ಬಬಿತಾ, ಹೆಜಮಾಡಿ ಮೀನುಗಾರಿಕ ಬಂದರು ಸಮಿತಿಯ ಅಧ್ಯಕ್ಷರಾದ ಸದಾಶಿವ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಕುಂದರ್, ಪ್ರಧಾನ ಕಾರ್ಯದರ್ಶಿಗಳಾದ ವಿಜಯ ಬಂಗೇರ, ಮೀನುಗಾರ ಮುಖಂಡರಾದ ಹರೀಶ್ ಚಂದ್ರ ಮೆಂಡನ್, ನಾರಾಯಣ ಮೆಂಡನ್, ದಿವಾಕರ ಮೆಂಡನ್ ಮತ್ತು ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್ ಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಉದಯ್ ಕುಮಾರ್, ಸಹಾಯಕ ಅಭಿಯಂತರರಾದ ಜಯರಾಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


ಕುರ್ಕಾಲು ಅಭಿಮಾನಿಗಳ ವತಿಯಿಂದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ

ಕುರ್ಕಾಲು ಅಭಿಮಾನಗಳು ಇವರ ವತಿಯಿಂದ ದಿನಾಂಕ 23-06-2023 ರಂದು ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷರು, ಹಿರಿಯರಾದ ದಿನಕರ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಶಿವರಾಮ ಶೆಟ್ಟಿ, ಕುರ್ಕಾಲು ಪಟ್ಟ ಚಾವಡಿಯ ಮುಖ್ಯಸ್ಥರಾದ ದಿನೇಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.