24 ಜೂನ್ 2023‌ ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು

ವನಮಹೋತ್ಸವ ಅಂಗವಾಗಿ ಗಿಡ ನೆಡುವ ಮತ್ತು ಗಿಡ ವಿತರಣಾ ಕಾರ್ಯಕ್ರಮ  

ಜಿಲ್ಲಾ ಗೃಹರಕ್ಷಕದಳ ಉಡುಪಿ ಜಿಲ್ಲೆ, ಕಾಪು ಮತ್ತು ಪಡುಬಿದ್ರಿ ಘಟಕ, ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 24-06-2023 ರಂದು ಸರಸ್ವತಿ ಮಂದಿರ ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ನಡೆದ “ಗಿಡಗಳು ನೆಡುವ ಮತ್ತು ವಿತರಣಾ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಗಿಡಗಳ ವಿತರಣೆ ಮಾಡಿದ ಅವರು ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಠರಾದ ಡಾll. ಪ್ರಶಾಂತ್ ಶೆಟ್ಟಿ, ಕಾಪು ಪೋಲಿಸ್ ವೃತ್ತ ನಿರೀಕ್ಷಕರಾದ ಕೆ.ಸಿ ಪೂವಯ್ಯ, ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕದಳ ಡೆಪ್ಯೂಟಿ ಕಮಾಂಡೆಟ್ ರಮೇಶ್, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಇಂದಿರಾ ಶೆಟ್ಟಿ, ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಸಂಚಾಲಕರಾದ ಗಂಗಾಧರ ಸುವರ್ಣ, ಪೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಲಕ್ಷ್ಮೀ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೇಸರಿ ಯುವರಾಜ್, ಕಾಪು ಗೃಹರಕ್ಷಕ ದಳದ ಘಟಕಾಧಿಕಾರಿಗಳಾದ ಕುಮಾರ್ ವಿ ಕೋಟ್ಯಾನ್, ಪಡುಬಿದ್ರಿ ಗೃಹರಕ್ಷಕ ದಳದ ಘಟಕಾಧಿಕಾರಿಗಳಾದ ನವೀನ್ ಕುಮಾರ್ ಉಪಸ್ಥಿತರಿದ್ದರು.


ಕಾಪು ವಿಧಾನಸಭಾ ಕ್ಷೇತ್ರದ ಪ್ರೌಢಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವ ಬಗ್ಗೆ ಸಭೆ

ಕಾಪು ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಖಾಸಗಿ ಪ್ರೌಢಶಾಲಾ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ಕರಾವಳಿಯ ಗಂಡು ಕಲೆ ಎಂದೆ ಪ್ರಸಿದ್ಧಿ ಪಡೆದ ಯಕ್ಷಗಾನ ಕಲೆಯನ್ನು ಕಲಿಸುವ ನಿಟ್ಟಿನಲ್ಲಿ ದಿನಾಂಕ 24-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಶಾಸಕರ ಕಚೇರಿಯಲ್ಲಿ ಯಕ್ಷಗಾನ ಕಲಾರಂಗ (ರಿ.) ಇದರ ಪದಾಧಿಕಾರಿಗಳೊಂದಿಗೆ ಮತ್ತು ಶಾಲಾ ಮುಖ್ಯೋಪಾಧ್ಯಾಯರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಮಕ್ಕಳ ನೈತಿಕ ಮೌಲ್ಯ ಹಾಗೂ ಜ್ಞಾನ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗ (ರಿ.) ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಉಪಾಧ್ಯಕ್ಷರಾದ ವಿ.ಜಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಜೊತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗ್ಡೆ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಉಪಸ್ಥಿತರಿದ್ದರು.


ಏಣಗುಡ್ಡೆ, ಮೂಡಬೆಟ್ಟು, ಕೋಟೆಮಟ್ಟು ಶಕ್ತಿಕೇಂದ್ರ ವತಿಯಿಂದ ಶಾಸಕರಿಗೆ ಅಭಿನಂದನೆ

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ಏಣಗುಡ್ಡೆ, ಮೂಡಬೆಟ್ಟು, ಕೋಟೆಮಟ್ಟು ಶಕ್ತಿಕೇಂದ್ರ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ದಿನಾಂಕ 24-06-2023 ರಂದು ಕಟಪಾಡಿ ಮಹಿಳಾ ಮಂಡಲದಲ್ಲಿ ಅಭಿನಂದನಾ ಸಮಾರಂಭ ನೆರವೇರಿತು.

ಸಮಾರಂಭದಲ್ಲಿ ಶಾಸಕರ ಗೆಲುವಿಗೆ ಕಾರಣಿಕರ್ತರಾದ ಬೂತ್ ಅಧ್ಯಕ್ಷರನ್ನು ಅಭಿನಂದಿಸಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಕಟಪಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಪೂಜಾರಿ, ಏಣಗುಡ್ಡೆ ಶಕ್ತಿಕೇಂದ್ರದ ಸಂಚಾಲಕರಾದ ಸಂತೋಷ್, ಮೂಡಬೆಟ್ಟು ಶಕ್ತಿಕೇಂದ್ರ ಸಂಚಾಲಕರಾದ ನಿತಿನ್ ವಿ ಸೇರಿಗಾರ್, ಕೋಟೆಮಟ್ಟು ಶಕ್ತಿಕೇಂದ್ರ ಅಧ್ಯಕ್ಷರಾದ ನಾಗರಾಜ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಗುರುಪ್ರಸಾದ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶೇಕ್ ಆಸೀಫ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ರಾಜೇಶ್ ಅಂಬಾಡಿ ಉಪಸ್ಥಿತರಿದ್ದರು.


Media Reports 24-06-2023