ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವನಮಹೋತ್ಸವ
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಳತ್ತೂರು, ಅರಣ್ಯ ಇಲಾಖೆ, ಕಳತ್ತೂರು ಗ್ರಾಮ ಪಂಚಾಯತ್, ಧರಣಿ ಸಮಾಜ ಸೇವಾ ಸಂಘ, ಕಾಪು ಇವರ ಜಂಟಿ ಸಹಯೋಗದೊಂದಿಗೆ ದಿನಾಂಕ 15-07-2023 ರಂದು ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ “ವನಮಹೋತ್ಸವ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಳತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಲೀಲಾಧರ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅನಿತಾ ಬಿ, ಉಡುಪಿ ವಲಯ ಅರಣ್ಯಾಧಿಕಾರಿಗಳಾದ ಸುಬ್ರಮಣ್ಯ ಆಚಾರ್ಯ, ಉಪ ವಲಯ ಅರಣ್ಯಾಧಿಕಾರಿಗಳಾದ ಜೀವನ್ ದಾಸ್ ಶೆಟ್ಟಿ, ಪ್ರಾಂಶುಪಾಲರಾದ ಉಮಕಾಂತ್ ಗೌಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜು 2023-24 ವಿದ್ಯಾರ್ಥಿ ಸಂಘದ ಉದ್ಘಾಟನೆ
ಸರಕಾರಿ ಪದವಿ ಪೂರ್ವ ಕಾಲೇಜು, ಪೊಲಿಪು ಇದರ 2023 -24 ರ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ದಿನಾಂಕ 15-07-2023 ರಂದು ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಸದಸ್ಯರಾದ ರತ್ನಾಕರ ಶೆಟ್ಟಿ, ಕಿರಣ್ ಆಳ್ವ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರವೀಣ್ ಕುಂದರ್, ಪೊಲಿಪು ಮೊಗವೀರ ಮಹಾಸಭಾ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಮೊಗವೀರ ಮಹಿಳಾ ಮಹಾಸಭಾ ಅಧ್ಯಕ್ಷರಾದ ಕವಿತಾ ಸುವರ್ಣ,ವಿದ್ಯಾರ್ಥಿ ಸಂಘದ ಸಂಚಾಲಕರಾದ ಜಿ.ಎಸ್ ನಾಗರಾಜ, ಪ್ರಾಂಶುಪಾಲರಾದ ಉಮಾ ಕೆ, ಮುಖ್ಯ ಶಿಕ್ಷಕರಾದ ರಮಣಿ ಉಪಸ್ಥಿತರಿದ್ದರು.
ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ – ಉಳಿಯಾರಗೋಳಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಗೆ ಚಾಲನೆ
ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಕಾಪು ವಿಧಾನಸಭಾ ಕ್ಷೇತ್ರದ ಇದರ ವತಿಯಿಂದ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆ, ಉಳಿಯಾರಗೋಳಿ ಕಾಪು ಇಲ್ಲಿನ ಪೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡಲಾಗುತ್ತಿದ್ದು, ದಿನಾಂಕ 15-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ತರಬೇತಿಗೆ ಚಾಲನೆ ನೀಡಿದರು.
ಶಾಲಾ ವಿದ್ಯಾರ್ಥಿಗಳಲ್ಲಿ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ ಅವರ ವಾಕ್ ಚಾತುರ್ಯವನ್ನು ಹೆಚ್ಚಿಸಿಕೊಳ್ಳಲು ಜೊತೆಗೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಒಂದು ಉತ್ತಮ ವೇದಿಕೆಯಾಗಿದೆ. ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ಇವರ ಮೂಲಕ ಈ ವರ್ಷದಿಂದ ಕಾಪು ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 15 ಶಾಲೆಗಳಲ್ಲಿ ಯಕ್ಷಗಾನ ತರಬೇತಿಯನ್ನು ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಉಪಾಧ್ಯಕ್ಷರಾದ ವಿ.ಜಿ ಶೆಟ್ಟಿ, ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಮಧುಕರ್, ಪ್ರಾಂಶುಪಾಲರಾದ ಮರೀನ ಸರೋಜ, ಮುಖ್ಯೋಪಾಧ್ಯಾಯರಾದ ಚಿತ್ರಲೇಖ ಟಿ ಶೆಟ್ಟಿ, ಯಕ್ಷಗಾನ ಗುರುಗಳಾದ ಮಂಜುನಾಥ್, ಶಿವಣ್ಣ ಬಾಯರ್ ಉಪಸ್ಥಿತರಿದ್ದರು.
ಶ್ರೀ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆ – ವಿದ್ಯಾರ್ಥಿ ಭವನ ಉದ್ಘಾಟನೆ
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಅನೆಗುಂದಿ ಮಠ, ಪಡು ಕುತ್ಯಾರು ಇಲ್ಲಿ ನಿರ್ಮಿಸಿರುವ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆ ಹಾಗೂ ವಿದ್ಯಾರ್ಥಿ ಭವನದ ಉದ್ಘಾಟನೆಯನ್ನು ದಿನಾಂಕ 15-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು ಶುಭ ಹಾರೈಸಿದರು.
ಶ್ರೀಮತ್ ಜಗದ್ಗುರು ಆನೆಗುಂದಿ ಸಂಸ್ಥಾನ ಸರಸ್ವತೀ ಪೀಠಾಧಿಪತಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಅವರು ಆಶೀರ್ವಚಿಸಿದರು.
ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್ ವಿತರಣೆ
ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ವತಿಯಿಂದ ಕೊಡಮಾಡಿದ ಸಮವಸ್ತ್ರ ಹಾಗೂ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಶೆಟ್ಟಿ ಅವರ ವತಿಯಿಂದ ಶಾಲಾ ಮಕ್ಕಳಿಗೆ ಕೊಡಮಾಡಿದ ಉಚಿತ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮ ದಿನಾಂಕ 15-07-2023 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಅನ್ನು ಉಚಿತವಾಗಿ ನೀಡಿದ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ನ ಅವಿನಾಶ್ ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕರಾದ ಪ್ರವೀಣ್ ಕುಮಾರ್ ಗುರ್ಮೆ, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಹೊರ್ತಿ ಅಮಾಗೊಂಡ, ಆಡಳಿತ ಮಂಡಳಿಯ ಸದಸ್ಯರಾದ ಶಾರದೇಶ್ವರಿ ಹಾಗೂ ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.
ಮಜೂರು ಗ್ರಾಮದ ನಾಗರೀಕರಿಂದ ಶಾಸಕರಿಗೆ ಅಭಿನಂದನಾ ಸಮಾರಂಭ
ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಮಜೂರು ಗ್ರಾಮದ ನಾಗರೀಕರ ವತಿಯಿಂದ ದಿನಾಂಕ 15-07-2023 ರಂದು ಅಭಿನಂದನಾ ಸಮಾರಂಭ ನೆರವೇರಿತು.
ಸಮಾರಂಭದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಲೀಲಾಧರ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜ್ಞಾನಪದ ವಿದ್ವಾಂಸರಾಗಿದ ಕೆ.ಎಲ್ ಕುಡಂತಾಯ, ಪ್ರಸಾದ್ ಶೆಟ್ಟಿ ಕುತ್ಯಾರು ಹಾಗೂ ಮಜೂರು ಗ್ರಾಮದ ನಾಗರೀಕರು ಉಪಸ್ಥಿತರಿದ್ದರು.
ದಾನಿಗಳಾದ ಮೋಕ್ಷಿತ್ ವರದರಾಜು ಅವರ ವತಿಯಿಂದ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ ವಿತರಣೆ
ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಶೆಟ್ಟಿ ಅವರ ಕಾರ್ಯ ವೈಖರಿಯನ್ನು ಮೆಚ್ಚಿ ದಾನಿಗಳಾದ ಮೋಕ್ಷಿತ್ ವರದರಾಜು ಅವರು ಕಾಪು ವಿಧಾನಸಭಾ ಕ್ಷೇತ್ರದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಧನದ ರೂಪದಲ್ಲಿ 2 ಲಕ್ಷ ರೂಪಾಯಿ ಹಣವನ್ನು ನೀಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿನಾಂಕ 15-07-2023 ರಂದು ಕಾಪು ತಾಲ್ಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿದರು.
5 ಸಾವಿರ ರೂಪಾಯಿಯಂತೆ ಒಟ್ಟು 40 ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಧನ ವಿತರಣೆ ಮಾಡಲಾಯಿತು.
ಈ ಮೀಡಿಯಾ ಕನ್ನಡ ವೆಬ್ ಸೈಟ್ ಅನಾವರಣ
ಈ ಮೀಡಿಯಾ ಕನ್ನಡ ವೆಬ್ ಸೈಟ್ ಇದರ ಅನಾವರಣ ಕಾರ್ಯಕ್ರಮದ ದಿನಾಂಕ 15-06-2023 ರಂದು ಹೋಟೆಲ್ K1 ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಈ ಮೀಡಿಯಾ ವೆಬ್ ಸೈಟ್ ಅನಾವರಣಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಕಾಪು ಎಸ್.ಕೆ.ಪಿ.ಎ ಅಧ್ಯಕ್ಷರಾದ ವಿನೋದ್ ಕಾಂಚನ್, ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಸಂಚಾಲಕರಾದ ಮಹಮ್ಮದ್ ಶರಿಫ್, ಸುಜ್ಲಾನ್ ಸಂಸ್ಥೆಯ ನಿರ್ದೇಶಕರಾದ ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು.