ರಾಜಕೀಯ ನಾಯಕರ ಉಪಚಾರಕ್ಕೆ ಐ.ಎ.ಎಸ್ ಅಧಿಕಾರಿಗಳ ನೇಮಕ ಮಾಡಿದ್ದು ಖಂಡನೀಯ ಎಂದು ಪ್ರಶ್ನಿಸಿದ ಬಿಜೆಪಿ ಶಾಸಕರನ್ನು ಸದನದಿಂದ ಅಮಾನತು ಮಾಡಿದ್ದು, ಇದನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ದಿನಾಂಕ 20-07-2023 ರಂದು ನಡೆದ ಧರಣಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಕಾಂಗ್ರೆಸ್ ಸರ್ಕಾರದ ಸಂವಿಧಾನ ವಿರೋಧಿ ಧೋರಣೆಯ ಬಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಅಡಿಕೆ ಸಹಕಾರಿ ಸಂಘಗಳ ಸಹಕಾರ ಮಹಾಮಂಡಳಿ ಶಿವಮೊಗ್ಗ ಇದರ ನೇತೃತ್ವದಲ್ಲಿ ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ದಿನಾಂಕ 20-07-2023 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆ, ಅಡಿಕೆ ಬೆಳೆಗೆ ಬರುವ ರೋಗಗಳ ಬಗ್ಗೆ ಮತ್ತು ಅಡಿಕೆ ಬೆಳೆಯ ಬಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳ ಬಗ್ಗೆ ಚರ್ಚಿಸಲಾಯಿತು.