ಹೆಜಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ 65.60 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ದಿನಾಂಕ 02-09-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ ಆರ್ ಮೆಂಡನ್, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಸತೀಶ್ ನಾಯಕ್, ಮುಂಬಯಿಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶೇಷಗಿರಿ ರಾವ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಶಿಕ್ಷಣ ಸಂಯೋಜಕಾದ ಅಶೋಕ್ ರಾವ್, ಪ್ರಾಂಶುಪಾಲರಾದ ವಿನ್ಸೆಂಟ್ ಡಿಸೋಜಾ, ಪೌಢಶಾಲಾ ಮುಖ್ಯ ಶಿಕ್ಷಕರಾದ ಸಂಪಾವತಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಲತಾ, ಹೆಜಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಇನಾಯತ್, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪಾಂಡುರಂಗ ಹೆಜಮಾಡಿ, ಶರಣ್ ಕುಮಾರ್ ಮಟ್ಟು, ಪವಿತ್ರಾ ಗಿರೀಶ್, ಫರಿದಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಸಹ ಶಿಕ್ಷಕರು ಉಪಸ್ಥಿತರಿದ್ದರು.