ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು ಯುವ ಮೋರ್ಚಾದ ಪದಾಧಿಕಾರಿಗಳೊಂದಿಗೆ ದಿನಾಂಕ 29-09-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು.
ಶಾಸಕರು ಮಾತನಾಡಿ ಕಾಪು ಕ್ಷೇತ್ರದಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಕನಿಷ್ಠ 300 ಸದಸ್ಯತ್ವ ನೋಂದಣಿ ಮಾಡಬೇಕು ಮತ್ತು ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಕಾಪು ಕ್ಷೇತ್ರದಿಂದ ಗರಿಷ್ಠ ಸದಸ್ಯತ್ವ ನೋಂದಣಿ ಮಾಡಲು ನಾವೆಲ್ಲರೂ ಶ್ರಮಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ “ಮನ್ ಕಿ ಬಾತ್” ಕಾರ್ಯಕ್ರಮನ್ನು ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಉಪಾಧ್ಯಕ್ಷರಾದ ಸಚಿನ್ ಸುವರ್ಣ, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.