ಕಾಪು ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿಯಾಗಿ ನವದುರ್ಗಾ ಲೇಖನ ಯಜ್ಞಕ್ಕೆ ಚಾಲನೆ
ಕಾಪು ಮಾರಿಯಮ್ಮನ ಸನ್ನಿದಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ 99,999 ನವದುರ್ಗಾ ಲೇಖನವನ್ನು ಬರೆಯುವ ಮಹಾ ಸಂಕಲ್ಪವನ್ನು ಲೋಕ ಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯವೃದ್ಧಿಗಾಗಿ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ದಿನಾಂಕ 29-10-2024 ಮಂಗಳವಾರದಂದು ವಾಗೀಶ್ವರಿ ಪೂಜೆಯ ಮೂಲಕ ಪೂಜ್ಯ ಪೇಜಾವರ ಶ್ರೀಗಳು, ಮಾಣಿಲ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವ ಜನರು ಬರೆಯುವ ಮುಖಾಂತರ ನವದುರ್ಗಾ ಲೇಖನ ಯಜ್ಞಕ್ಕೆ ಇಂದು ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.
ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ಕೆ.ವಾಸುದೇವ ಶೆಟ್ಟಿ, ಉಪಾಧ್ಯಕ್ಷರಾದ ಮನೋಹರ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಬಂಜಾರ ಪ್ರಕಾಶ್ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್, ಕಾರ್ಯಧ್ಯಕ್ಷರಾದ ಕೃಷ್ಣಪ್ರಸಾದ್ ಅಡ್ಯಂತಾಯ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಡಾ ವಿದ್ಯಾ ಶಂಕರ್ ಶೆಟ್ಟಿ, ಅಶೋಕ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಬಾಲಾಜಿ, ಕೋಶಾಧಿಕಾರಿ ಕೆ ವಿಶ್ವನಾಥ್, ಹುಬ್ಬಳ್ಳಿ- ದಾರವಾಡ ಸಮಿತಿ ಕಾರ್ಯಧ್ಯಕ್ಷರಾದ ಸುಗ್ಗಿ ಸುಧಾಕರ್ ಶೆಟ್ಟಿ, ಲೇಖನ ಯಜ್ಞ ಸಮಿತಿ ಮಂಗಳೂರು ಸಮಿತಿ ಅಧ್ಯಕ್ಷರಾದ ಚಂದ್ರಹಾಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಸಂದೀಪ್ ಮಂಜ, ಸಂಚಾಲಕರಾದ ಸುವರ್ಧನ್ ನಾಯಕ್, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸಮಿತಿ ಸದ್ಯಸರು ಉಪಸ್ಥಿತರಿದ್ದರು.