ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಶ್ರೀ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ಅವರೊಂದಿಗೆ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕಾಪು ಮತಕ್ಷೇತ್ರದಲ್ಲಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ನಾಯಕ್, ಉದ್ಯಮಿಗಳಾದ ಶ್ರೀ ಕೆ. ಪ್ರಕಾಶ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.