News & Media
ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆ
ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ದಿನಾಂಕ 12-11-2024 ರಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಉಡುಪಿ ತಾಲೂಕಿನ ಕಾಪು ಕ್ಷೇತ್ರದ 10 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ 94 ಸಿ. ಹಾಗೂ 94 ಸಿ.ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಕಡತಗಳನ್ನು ಶೀಘ್ರವೇ ವಿಲೆಗೊಳಿಸುವಂತೆ ತಿಳಿಸಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ತುರ್ತು ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖಾಧಿಕಾರಿಗಳಿಗೆ
ಶಿಗ್ಗಾಂವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗಿ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಲುವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಮತ್ತು ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ದಿನಾಂಕ 11-11-2024 ರಂದು ಭಾರತೀಯ ಜನತಾ ಪಾರ್ಟಿ ಮಂಡಲ ಕಾರ್ಯಲಯ ಶಿಗ್ಗಾಂವಿ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಲುವಾಗಿ ಸಂಸದರು, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ದಿನಾಂಕ 11-11-2024 ರಂದು ಭಾರತೀಯ ಜನತಾ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಲುವಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಬಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡಿನ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಯಾಗಿರುವ ಭರತ್ ಬೊಮ್ಮಾಯಿ ಅವರ ಪರವಾಗಿ ಮತಯಾಚನೆ ಮಾಡಿದರು.
ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ
ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾ. ಶಿವರಾಮ ಕಾರಂತ ಹೂಟ್ಟೂರು ಪ್ರಶಸ್ತಿ ಪ್ರದಾನ “ಸವಿನ್ಯ” – ಮೇಘಾಲಯ ರಾಜ್ಯಪಾಲರೊಂದಿಗೆ ಭಾಗಿ ಕೋಟತಟ್ಟು ಗ್ರಾಮ ಪಂಚಾಯತ್, ಕೋಟತಟ್ಟು, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.), ಕೋಟ ಸಹಯೋಗದಲ್ಲಿ ದಿನಾಂಕ 10-11-2024 ರಂದು ಕೋಟ ಶಿವರಾಮ್ ಕಾರಂತ ಥೀಂ ಪಾರ್ಕ್ ನಲ್ಲಿ ಆಯೋಜಿಸಲಾದ ಡಾll. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾll ಶಿವರಾಮ ಕಾರಂತ ಹೂಟ್ಟೂರು ಪ್ರಶಸ್ತಿ
ನವೆಂಬರ್ 10 ರಂದು ನಡೆದ ವಿವಿಧ ಕಾರ್ಯಕ್ರಮಗಳು
ಕುಂಭನಿಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಬೆಳ್ಮಣ್ ಇದರ ಉದ್ಘಾಟನಾ ಸಮಾರಂಭದಲ್ಲಿ ದಿನಾಂಕ 10-11-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು. ಶ್ರೀ ಧಾಮ ಮಾಣಿಲ ಪರಮಪೂಜ್ಯಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚಿಸಿದರು. ಮೂಡುಬೆಳ್ಳೆ ಎಲ್ವಿನ್ ಆರ್ಕೇಡ್ ನಲ್ಲಿ ದಿನಾಂಕ 10-11-2024 ರಂದು ನಡೆದ ಕರ್ನಾಟಕ ಭೋವಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ (ಲಿ.) ಇದರ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು
ಕೆ.ಪಿ.ಎಸ್ ಹಿರಿಯಡಕ ಹಳೆ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ
ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡಕ ಇದರ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ದಿನಾಂಕ 09-11-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ವಿಶ್ರಾಂತ ಪ್ರಾಧ್ಯಾಪಕರಾದ ಎನ್.ಎಸ್ ಶೆಟ್ಟಿ, ಉದ್ಯಮಿಗಳಾದ ನಟರಾಜ್ ಹೆಗ್ಡೆ, ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟ (ರಿ.) ಬೆಂಗಳೂರು ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್,
ದಂಡತೀರ್ಥ ಸಮೂಹ ವಿದ್ಯಾಸಂಸ್ಥೆ – ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ
ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳು ಉಳಿಯಾರಗೋಳಿ ಕಾಪು ಇದರ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭದಲ್ಲಿ ದಿನಾಂಕ 08-11-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಎಂ.ಆರ್.ಜಿ ಗ್ರೂಪ್ ಅಧ್ಯಕ್ಷರಾದ ಡಾ. ಬಂಜಾರ ಪ್ರಕಾಶ್ ಶೆಟ್ಟಿ, ಮಂಗಳೂರು ನಿಟ್ಟೆ ವಿಶ್ವವಿದ್ಯಾನಿಲಯ ಸಹ ಕುಲಾಧಿಪತಿಗಳಾದ ಡಾ. ಎಂ ಶಾಂತಾರಾಮ್ ಶೆಟ್ಟಿ, ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾದ ಎಚ್.ಎಸ್ ಬಲ್ಲಾಲ್, ಮಸ್ಕತ್ ಮಲ್ಟಿಟೆಚ್ ಗ್ರೂಪ್ ಸಂಸ್ಥಾಪಕರಾದ ದಿವಾಕರ್ ಶೆಟ್ಟಿ, ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ
ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಉದ್ಘಾಟನಾ ಸಮಾರಂಭ
ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಸೈನ್ಸ್, ಉಡುಪಿ, ನೇತ್ರ ಜ್ಯೋತಿ ಕಾಲೇಜ್ ಆಫ್ ಪಾರಾ ಮೆಡಿಕಲ್ ಸೈನ್ಸ್, ಉಡುಪಿ, ನೇತ್ರ ಜ್ಯೋತಿ ಕಾಲೇಜ್ ಆಫ್ ಫಿಜಿಯೋಥೆರಫಿ, ಉಡುಪಿ ಇದರ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಉದ್ಘಾಟನಾ ಸಮಾರಂಭದಲ್ಲಿ ದಿನಾಂಕ 08-11-2024 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಈ ಸಂದರ್ಭದಲ್ಲಿ
ಕೇಂದ್ರ ಸರಕಾರದ ಎಲ್ಲಾ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ
ಪಿ.ಎಂ ವಿಶ್ವಕರ್ಮ ಯೋಜನೆ, ಸ್ವ-ನಿಧಿ ಯೋಜನೆ, ಮುದ್ರಾ ಯೋಜನೆ ಮತ್ತು ಕೇಂದ್ರ ಸರಕಾರದ ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ಮಣಿಪಾಲ ರಜತಾದ್ರಿ ಇಲ್ಲಿ ದಿನಾಂಕ 08-11-2024 ರಂದು ನಡೆದ “ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಸ್ವ-ನಿಧಿ ಯೋಜನೆ, ಮುದ್ರಾ ಯೋಜನೆ ಮತ್ತು ಕೇಂದ್ರ ಸರಕಾರದ ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು
ಕಾಪು ಪುರಸಭೆಯ ಸಾಮಾನ್ಯ ಸಭೆ
ಕಾಪು ಪುರಸಭೆಯ ಸಾಮಾನ್ಯ ಸಭೆ ದಿನಾಂಕ 07-11-2024 ರಂದು ಕಾಪು ಪುರಸಭೆಯ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಪುರಸಭೆಯ ಸದಸ್ಯರು ಮತ್ತು