News & Media
16 ಜೂನ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ರೂ. 3 ಕೋಟಿ 75 ಲಕ್ಷ ವೆಚ್ಚದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿ – ಉದ್ಘಾಟನೆ ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ 3 ಕೋಟಿ 75 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ದಿನಾಂಕ 16-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಹೆಜಮಾಡಿ ಗ್ರಾಮ
ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಸ್ಥಳಕ್ಕೆ ಶಾಸಕರ ಭೇಟಿ
ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ದಿನಾಂಕ 15-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು
ಯುವ ಉತ್ಸವ 2023 ಉದ್ಘಾಟನಾ ಸಮಾರಂಭ
ನೆಹರು ಯುವ ಕೇಂದ್ರ ಉಡುಪಿ ಇವರ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಪೂರ್ಣಪ್ರಜ್ಞ ಕಾಲೇಜು, ಉಡುಪಿ, ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 14-06-2023 ರಂದು ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂ ನಲ್ಲಿ ನಡೆದ “ಜಿಲ್ಲಾ ಯುವ ಉತ್ಸವ – 2023” ಉದ್ಘಾಟನಾ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ
14 ಜೂನ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ದಿನಾಂಕ 14-06-2023 ರಂದು ನಡೆದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ
ಮಜೂರು ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ
ಕಾಪು ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಮಜೂರು ಗ್ರಾಮ ಪಂಚಾಯತ್ ವತಿಯಿಂದ ದಿನಾಂಕ 13-06-2023 ರಂದು ಮಜೂರು ಗ್ರಾಮ ಪಂಚಾಯತ್ನಲ್ಲಿ ಅಭಿನಂದನಾ ಸಮಾರಂಭ ನೆರವೇರಿತು. ಸಭೆಯಲ್ಲಿ ಶಾಸಕರು ಪಂಚಾಯತ್ನ 5 ಶೇಕಡ ನಿಧಿಯಿಂದ ವಿಕಲಚೇತನರ ಕಲ್ಯಾಣ ನಿಧಿಯ ಸವಲತ್ತು ವಿತರಣೆ ಮಾಡಿ ಇಂದಿರಾ ಗಾಂಧಿ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಆದೇಶ ಪತ್ರವನ್ನು ವಿತರಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಶಾಸಕರು ಮಾತನಾಡಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ
12 ಜೂನ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಕಾಪು ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ತಾತ್ಕಾಲಿಕ ಗುಡಿಗೆ ಸಾನ್ನಿಧ್ಯ ಚಾಲನಾ ಸಮಾರಂಭ – ಧಾರ್ಮಿಕ ಸಭಾ ಕಾರ್ಯಕ್ರಮ ಕಾಪು ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ತಾತ್ಕಾಲಿಕ ಗುಡಿಗೆ ಸಾನ್ನಿಧ್ಯ ಚಾಲನಾ ಸಮಾರಂಭ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದಿನಾಂಕ 12-06-2023 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರು, ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಜ್ಯೋತಿರ್ವಿವಿದ್ವಾನ್ ಶ್ರೀ ಕೆ.ಜಿ ರಾಘವೇಂದ್ರ ತಂತಿ ಕೊರಂಗ್ರಪಾಡಿ
ಬಿಜೆಪಿ ಶಕ್ತಿ ಕೇಂದ್ರ ಕುತ್ಯಾರು ವತಿಯಿಂದ ಶಾಸಕರಿಗೆ ಅಭಿನಂದನೆ – ಕಾರ್ಯಕರ್ತರ ಸಭೆ
ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಕುತ್ಯಾರು ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಕಾರ್ಯಕರ್ತರ ಸಭೆ ದಿನಾಂಕ 11-06-2023 ರಂದು ಕುತ್ಯಾರು ನವೀನ್ ಶೆಟ್ಟಿ ಅವರ ಮನೆಯ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ವಿಧಾನ ಪರಿಷತ್ ಸದಸ್ಯರು ನಿಕಟಪೂರ್ವ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ,