ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಖಂಡಿಸಿ ಪ್ರತಿಭಟನೆ

ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿ ಕಬಳಿಕೆ ಮಾಡುತ್ತಿರುವ ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಪು ಮಂಡಲ ಬಿಜೆಪಿ ವತಿಯಿಂದ‌ ದಿನಾಂಕ 06-11-2024 ರಂದು ನಡೆದ “ಬೃಹತ್ ಪ್ರತಿಭಟನೆ”ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಕಾಪು ಪೇಟೆಯಿಂದ ಕಾಪು ತಾಲೂಕು ಆಡಳಿತ ಸೌಧದದವೆರೆಗೆ ಕಾಲ್ನಡಿಗೆ ಮೂಲಕ ಸಾಗಿ ಬಂದು ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದಿ ಖಂಡಿಸಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಉಪತಹಸಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.

Read More

ಹೆಜಮಾಡಿ ಮೀನುಗಾರಿಕಾ ಬಂದರು ಕಾಮಗಾರಿ ಪೂರ್ಣಗೊಳಿಸಲು ಮನವಿ

ಉಡುಪಿ ಜಿಲ್ಲೆ ಕಾಪು ತಾಲೂಕಿನ ಹೆಜಮಾಡಿ ಬಂದರಿಗೆ 2021-22 ಸಾಲಿನಲ್ಲಿ 180 ಕೋಟಿ ಮಂಜುರಾಗಿದ್ದು ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಮತ್ತು ಸುತ್ತಮುತ್ತಲಿನ ಮೀನುಗಾರರಿಗೆ ತೊಂದರೆ ಆಗುತ್ತಿದ್ದು ಮೀನುಗಾರಿಕಾ ದೋಣಿ ತಂಗುದಾಣಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿ ಹೆಜಮಾಡಿ ಬಂದರಿನ ಕಾಮಗಾರಿಯನ್ನು ಕೂಡಲೆ ಕೈಗೊಳ್ಳಬೇಕಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮೀನುಗಾರಿಕಾ ಮುಖ್ಯ ಕಾರ್ಯದರ್ಶಿಗಳಾದ ಅಜಯ್ ನಾಗಭೂಷಣ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಮೀನುಗಾರಿಕಾ ಕಾರ್ಯದರ್ಶಿ ಅಜಯ್ ನಾಗಭೂಷಣ್ ಅವರು

Read More

ರೂ. 10 ಕೋಟಿ ಅನುದಾನದಲ್ಲಿ ಹಿರಿಯಡಕ – ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿ  

ಬಹು ದಿನಗಳ ಬೇಡಿಕೆಯ ಹಿರಿಯಡಕ – ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ 10 ಕೋಟಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ದಿನಾಂಕ 04-11-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಮಹಾಶಕ್ತಿ ಕೇಂದ್ರದ

Read More

ಕೊಡ್ಲಿ ನೆನಪು ಮತ್ತು ಉತ್ತಮ ಕೃಷಿಕ ಸನ್ಮಾನ ಹಾಗೂ ಶಾಲಾ ಬಸ್ಸು ನಿರ್ವಹಣೆ ಬಗ್ಗೆ ಚೆಕ್ ವಿತರಣೆ

ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ (ರಿ.), ಅಮಾಸೆಬೈಲು, ಕರ್ಣಾಟಕ ಬ್ಯಾಂಕ್ (ಲಿ.) ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಧರ್ಮಸ್ಥಳ, ಗ್ರಾಮ ಪಂಚಾಯತ್, ಅಮಾಸೆಬೈಲು, ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ಅಮಾಸೆಬೈಲು ಹಾಗೂ ಬಿ. ವಿ. ಜಿ. ಕೊಡ್ಲಿ ಅಭಿಮಾನಿ ಬಳಗ ಇವರ ಸಹಯೋಗದಲ್ಲಿ ದಿನಾಂಕ 03-11-2024 ರಂದು ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ “ಕೊಡ್ಲಿ ನೆನಪು ಮತ್ತು ಉತ್ತಮ ಕೃಷಿಕ ಸನ್ಮಾನ ಹಾಗೂ ಶಾಲಾ ಬಸ್ಸು ನಿರ್ವಹಣೆ ಬಗ್ಗೆ

Read More

ವಿದ್ಯಾರ್ಥಿ ವೇತನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ (ರಿ.) ಬೆಂಗಳೂರು ಇದರ ಉಡುಪಿ ಜಿಲ್ಲಾ ಘಟಕದ 3ನೇ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 02-11-2024 ರಂದು ಆಯೋಜಿಸಲಾದ “ವಿದ್ಯಾರ್ಥಿ ವೇತನ ಸಾಧಕರಿಗೆ ಸನ್ಮಾನ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ (ರಿ.) ಬೆಂಗಳೂರು ಇದರ ಉಡುಪಿ

Read More

ವಿವಿಧೆಡೆಗಳಲ್ಲಿ ನಡೆದ ಗೋಪೂಜೆ

ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ, ಮಟ್ಟಾರು ವತಿಯಿಂದ ಇಂದು ದಿನಾಂಕ 02-11-2024 ರಂದು ಮಟ್ಟಾರು ಮೈದಾನದಲ್ಲಿ ಆಯೋಜಿಸಿಲಾದ 12ನೇ ವರ್ಷದ “ಸಾರ್ವಜನಿಕ ಗೋಪೂಜಾ ಉತ್ಸವ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಊರ ಗಣ್ಯರು ಉಪಸ್ಥಿತರಿದ್ದರು. ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಗೋಪೂಜೆ  ಗೋ ಪೂಜೆ

Read More

ಗೋ ಪೂಜೆ

ಗೋ ಪೂಜೆ ಮತ್ತು ಬಲಿಪಾಡ್ಯಮಿಯ ಸುದಿನ  ದಿನಾಂಕ 02-11-2024 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನಿವಾಸದಲ್ಲಿರುವ ಭಾಗೀರಥೀ ಗೋಗೃಹದಲ್ಲಿ ಅಸಂಖ್ಯ ಕೋಟಿ ದೇವಾನುದೇವತೆಗಳ ನೆಲೆಯಾದ ಗೋ ಮಾತೆ, ನಮ್ಮ ಹಿಂದು ಧರ್ಮದ ಕಾಮಧೇನು ಗೋ ಮಾತೆಗೆ ಪೂಜಾ ಕಾರ್ಯಕ್ರಮ ನೆರವೇರಿತು.  

Read More

ಕಾಪು ತಾಲೂಕು ಮಟ್ಟದ 69ನೇ ಕನ್ನಡ ರಾಜ್ಯೋತ್ಸವ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಾಪು ತಾಲೂಕು ಆಡಳಿತ ಸೌಧದಲ್ಲಿ ದಿನಾಂಕ 01-11-2024 ರಂದು ಆಯೋಜಿಸಲಾದ “69ನೇ ಕನ್ನಡ ರಾಜ್ಯೋತ್ಸವ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುಂಡಲೀಕ ಮರಾಠೆ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪ್ರಭಾರ ತಹಶೀಲ್ದಾರರಾದ ಭೀಮ್ ಸೇನ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ವೃತ್ತ ನಿರೀಕ್ಷಕರು ಹಾಗೂ ಕಾಪು

Read More

ಎಸ್‌.ಡಿ.ಎಮ್‌ ಆಯುರ್ವೇದ ಕಾಲೇಜಿಗೆ ಭೇಟಿ

ಎಸ್‌.ಡಿ.ಎಮ್‌ ಆಯುರ್ವೇದ ಕಾಲೇಜ್, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಕುತ್ಪಾಡಿ, ಉಡುಪಿ ಸಂಸ್ಥೆಯು ನ್ಯಾಶನಲ್‌ ಕಮಿಶನ್ ಫಾರ್‌ ಇಂಡಿಯನ್‌ ಸಿಸ್ಟಮ್‌ ಅಪ್‌ ಮೆಡಿಸಿನ್‌ (NCISM) ನಡೆಸಿದ (MARBISM) ಭಾರತೀಯ ವೈದ್ಯ ಪದ್ಧತಿಯ ಸಂಸ್ಥೆಗಳ ವೈದ್ಯಕೀಯ ಮೌಲ್ಯಮಾಪನ ಸಂಸ್ಥೆ ನವ ದೆಹಲಿ ಹಾಗೂ (QCI) ರಾಷ್ಟ್ರೀಯ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಮೌಲ್ಯಮಾಪನದಲ್ಲಿ ಅಖಿಲ ಭಾರತ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದು, ದಿನಾಂಕ 30-10-2024 ರಂದು ಕಾಲೇಜಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪ್ರಾಂಶುಪಾಲರಾದ ಮಮತಾ

Read More

ಉಡುಪಿ ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಸಭೆ

ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ (66,169,169A,766C) ಕಾಮಗಾರಿಗಳ ಪ್ರಗತಿ ಮತ್ತು ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 30-10-2024 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ದಾರಿದೀಪ ಇಲ್ಲದೇ ಇದ್ದು ಸರಿಪಡಿಸುವ ಬಗ್ಗೆ ಕಟಪಾಡಿ ಜಂಕ್ಷನ್ ನಲ್ಲಿ

Read More