News & Media
ನವದುರ್ಗಾ ಲೇಖನ ಯಜ್ಞಕ್ಕೆ ಚಾಲನೆ
ಕಾಪು ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿಯಾಗಿ ನವದುರ್ಗಾ ಲೇಖನ ಯಜ್ಞಕ್ಕೆ ಚಾಲನೆ ಕಾಪು ಮಾರಿಯಮ್ಮನ ಸನ್ನಿದಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ 99,999 ನವದುರ್ಗಾ ಲೇಖನವನ್ನು ಬರೆಯುವ ಮಹಾ ಸಂಕಲ್ಪವನ್ನು ಲೋಕ ಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯವೃದ್ಧಿಗಾಗಿ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ದಿನಾಂಕ 29-10-2024 ಮಂಗಳವಾರದಂದು ವಾಗೀಶ್ವರಿ ಪೂಜೆಯ ಮೂಲಕ ಪೂಜ್ಯ ಪೇಜಾವರ ಶ್ರೀಗಳು, ಮಾಣಿಲ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವ ಜನರು ಬರೆಯುವ ಮುಖಾಂತರ ನವದುರ್ಗಾ ಲೇಖನ ಯಜ್ಞಕ್ಕೆ ಇಂದು ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಶಾಸಕರು,
51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ
ಭಾರತೀಯ ವಿದ್ವತ್ ಪರಿಷತ್, ಬೆಂಗಳೂರು, ಪರ್ಯಾಯ ಶ್ರೀ ಪುತ್ತಿಗೆ ಮಠ, ಉಡುಪಿ, ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಹೊಸದಿಲ್ಲಿ ಇವರ ಸಹಭಾಗಿತ್ವದಲ್ಲಿ ದಿನಾಂಕ 24-10-2024 ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾದ “51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಪರಮಪೂಜ್ಯ ಶ್ರೀ ಯೋಗಋಷಿ ಸ್ವಾಮಿ ರಾಮದೇವ್ ಮಹಾರಾಜ್, ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಕಿರಿಯ ಸ್ವಾಮೀಜಿಗಳಾದ
ಬಾಬಾ ರಾಮದೇವ್ ಅವರೊಂದಿಗೆ ಶ್ರೀಕೃಷ್ಣ ಮಠಕ್ಕೆ ಭೇಟಿ
ವಿವಿಧ ಕಾರ್ಯಕ್ರಮ ನಿಮಿತ್ತ ಉಡುಪಿಗೆ ಆಗಮಿಸಿದ ಭಾರತೀಯ ಯೋಗ ಗುರು, ಉದ್ಯಮಿ ಮತ್ತು ಪತಂಜಲಿ ಆಯುರ್ವೇದ ಬ್ರಾಂಡ್ ಅಂಬಾಸಿಡರ್ ಬಾಬಾ ರಾಮದೇವ್ ಅವರೊಂದಿಗೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿನಾಂಕ 23-10-2024 ರಂದು ಶ್ರೀಕೃಷ್ಣ ಮಠಕ್ಕೆ ಭೇಟಿ ಶ್ರೀ ಕೃಷ್ಣನ ದರ್ಶನ ಪಡೆದು ಗೀತಾ ಮಂದಿರಕ್ಕೆ ಭೇಟಿ ನೀಡಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ
ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ – ಮತ ಚಲಾವಣೆ
ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆಯ ಸಲುವಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿನಾಂಕ 21-10-2024 ರಂದು ಕಾಪು ಪುರಸಭೆಗೆ ತೆರಳಿ ತಮ್ಮ ಮತ ಚಲಾಯಿಸಿದರು. ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಸದಸ್ಯರು ತಮ್ಮ ಗ್ರಾಮ ಪಂಚಾಯತ್‌ಗೆ ತೆರಳಿ ತಪ್ಪದೇ ಮತದಾನ ಮಾಡಿ ಕಾಪು ಪುರಸಭಾ ಸದಸ್ಯರು ಪುರಸಭೆಗೆ ತೆರಳಿ ತಪ್ಪದೇ ಮತ ಚಲಾಯಿಸಿ.
ಉಡುಪಿ ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆ ಪೂರ್ವಭಾವಿ ಸಭೆ
ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ದಿನಾಂಕ 17-10-2024 ರಂದು ಪಡುಬಿದ್ರಿಯಲ್ಲಿ ನಡೆದ ಹೆಜಮಾಡಿ, ಪಡುಬಿದ್ರಿ, ಪಲಿಮಾರು, ಮುದರಂಗಡಿ, ಎಲ್ಲೂರು, ತೆಂಕ, ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಶಾಸಕರು ಮಾತನಾಡಿ ಭಾರತೀಯ ಜನತಾ ಪಾರ್ಟಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ
ಪಡುಬಿದ್ರಿ ಮಹಾಶಕ್ತಿ ಕೇಂದ್ರ ಸಭೆ
ವಿಧಾನ ಪರಿಷತ್ ಚುನಾವಣೆ ಹಾಗೂ ಬಿಜೆಪಿ ಸದಸ್ಯತ್ವ ನೋಂದಣಿ ಪೂರ್ವಭಾವಿಯಾಗಿ ಪಡುಬಿದ್ರಿ ಮಹಾಶಕ್ತಿ ಕೇಂದ್ರ ಸಭೆ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಾಗೂ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿಯಾಗಿ ದಿನಾಂಕ 13-10-2024 ರಂದು ನಡೆದ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಶಾಸಕರು ಮಾತನಾಡಿ ಭಾರತೀಯ ಜನತಾ ಪಾರ್ಟಿ ಕಿಶೋರ್ ಕುಮಾರ್ ಬೊಟ್ಯಾಡಿ ಅರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ
ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಭೆ
ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆ ದಿನಾಂಕ 08-10-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಭಾರತೀಯ ಜನತಾ ಪಾರ್ಟಿ ಕಿಶೋರ್ ಕುಮಾರ್ ಬೊಟ್ಯಾಡಿ ಅರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ ಇವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ
ಹರಿಯಾಣದಲ್ಲಿ ಬಿಜೆಪಿ – ಕಾಪು ಮಂಡಲ ಬಿಜೆಪಿ ವತಿಯಿಂದ ವಿಜಯೋತ್ಸವ
ಹರಿಯಾಣ ರಾಜ್ಯದ ಚುನಾವಣೆ ಫಲಿತಾಂಶ ಬಂದಿದ್ದು ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಸತತ 3ನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದು, ಈ ಸಲುವಾಗಿ ಕಾಪು ಮಂಡಲ ಬಿಜೆಪಿ ವತಿಯಿಂದ ದಿನಾಂಕ 08-10-2024 ರಂದು ನಡೆದ ವಿಜಯೋತ್ಸವದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ
ಆರ್.ಡಿ.ಪಿ.ಆರ್ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ಭಾಗಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಜಿಲ್ಲಾ ಸಮಿತಿ ಅವರ ನೇತೃತ್ವದಲ್ಲಿ ಆರ್.ಡಿ.ಪಿ.ಆರ್ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ದಿನಾಂಕ 08-10-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಕಟಪಾಡಿ ಪೇಟೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಕಟಪಾಡಿ ಪೇಟೆಯಲ್ಲಿ ದಿನಾಂಕ 06-10-2024 ರಂದು ನಡೆದ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀನಿವಾಸ್ ಕಿಣಿ, ಸುಭಾಸ್ ಬಲ್ಲಾಳ್, ಪವಿತ್ರಾ ಶೆಟ್ಟಿ, ಈಶ್ವರ್ ಕಟಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷರಾದ ವೀಣಾ