News & Media
ಕರಾವಳಿಯ ಸಾಹಿತಿಗಳು-ಕಲಾವಿದರು ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ – ಪೂರ್ವಭಾವಿ ಸಭೆ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್ 29 ರಂದು ಕುಂಜಿಬೆಟ್ಟು ಶಾರಾದಾ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ “ಕರಾವಳಿಯ ಸಾಹಿತಿಗಳು-ಕಲಾವಿದರು ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ” ಪೂರ್ವಭಾವಿಯಾಗಿ ದಿನಾಂಕ 22-09-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ
ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿ ಸಭೆ
ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು ಸದಸ್ಯತ್ವ ನೋಂದಣಿ ಅಭಿಯಾನದ ಸಂಚಾಲಕರು, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರೊಂದಿಗೆ ದಿನಾಂಕ 21-09-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು. ಶಾಸಕರು ಮಾತನಾಡಿ ಉಡುಪಿ ಜಿಲ್ಲೆ ಸಂಘಟಿತ ಜಿಲ್ಲೆ ಕಾಪು ಕ್ಷೇತ್ರದಲ್ಲಿ ಅತ್ಯಧಿಕ ಸದಸ್ಯತ್ವ ನೋಂದಣಿ ಮಾಡುವ ಮೂಲಕ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ
ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ
ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಂಜೆ ಸಮೃದ್ಧಿ ನಗರ ರಸ್ತೆ ಅಭಿವೃದ್ಧಿಗೆ ಹಾಗೂ ದೇವಳಗುಜ್ಜಿ ವಿನಯ್ ಮನೆ ಸಂಪರ್ಕ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ರೂ. 7 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ದಿನಾಂಕ 18-09-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಉಪಾಧ್ಯಕ್ಷರಾದ ಜಾನ್ ಸಿಕ್ವೇರ, ಸದಸ್ಯರಾದ
ಕಾಪು ತಾಲೂಕು ಮಟ್ಟದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ
ಕಾಪು ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ ದಿನಾಂಕ 17-09-2024 ರಂದು ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಆಯೋಜಿಸಲಾದ ಕಾಪು ತಾಲೂಕು ಮಟ್ಟದ “ಶ್ರೀ ವಿಶ್ವಕರ್ಮ ಜಯಂತಿ ಆಚರಣೆ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್ ಹಾಗೂ ವಿಶ್ವಕರ್ಮ ಸಮಾಜದ ಮುಖಂಡರು, ಪ್ರಮುಖರು ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಅವರ ಜನ್ಮದಿನ – ಕಾಪು ಮಂಡಲ ಓಬಿಸಿ ಮೋರ್ಚಾದಿಂದ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ
ಭಾರತವನ್ನು ವಿಶ್ವ ಗುರುವನ್ನಾಗಿಸಲು ಶ್ರಮಿಸುತ್ತಿರುವ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ದಿನಾಂಕ 17-09-2024 ರಂದು ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ (ಓಬಿಸಿ) ಮೋರ್ಚಾದ ವತಿಯಿಂದ ಕಟಪಾಡಿ ಅಚ್ಚಡ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ ನೆರವೇರಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶಾಲಾ ಮಕ್ಕಳಿಗೆ ಸಾಂಕೇತಿಕವಾಗಿ ಸಿಹಿ ಹಂಚಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಮಂಡಲ
ಪ್ರಧಾನಿ ಮೋದಿ ಅವರ ಜನ್ಮದಿನ – ಕಾಪು ಮಾರಿಯಮ್ಮನಿಗೆ ವಿಶೇಷ ಪೂಜೆ
ನೆಚ್ಚಿನ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಪ್ರಯುಕ್ತ ದಿನಾಂಕ 17-09-2024 ರಂದು ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ವಿಶೇಷ ಪೂಜೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ – ಪೂರ್ವಭಾವಿ ಸಭೆ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ದಿನಾಂಕ 15-09-2024 ರಂದು ನಡೆದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ಪುರಸಭೆ ವ್ಯಾಪ್ತಿಯ ಸಮಿತಿಗಳ ಪೂರ್ವಭಾವಿ ಸಭೆಯಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನವದುರ್ಗಾ ಲೇಖನ ಯಜ್ಞದ ಕುರಿತು ಚರ್ಚಿಸಿ ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ಇದರ ವಾರ್ಷಿಕ ಮಹಾಸಭೆ
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ಇದರ ವಾರ್ಷಿಕ ಮಹಾಸಭೆ ದಿನಾಂಕ 15-09-2024 ರಂದು ಪಿಲಾರುಖಾನ ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ನಡೆಯಿತು. ವಾರ್ಷಿಕ ಮಹಾಸಭೆಯನ್ನು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿ ಕೊರಗ ಸಮುದಾಯದ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡ ಬೇಕು ಇದರಿಂದ ಅವರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದ ಅವರು ಅಳಿವಿನ ಅಂಚಿನಲ್ಲಿರುವ ಕೊರಗ ಸಮುದಾಯದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಇದಕ್ಕಾಗಿ ಶಾಸಕನಾಗಿ
ಹಿಂದೂ ಯುವಸೇನೆ ಹಿರಿಯಡಕ ಶಾಖೆ ವತಿಯಿಂದ ಬೃಹತ್ ರಕ್ತದಾನ ಶಿಬಿರ
ಹಿಂದೂ ಯುವಸೇನೆ ಹಿರಿಯಡಕ ಶಾಖೆ ವತಿಯಿಂದ ರಕ್ತನಿಧಿ ವಿಭಾಗ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದಲ್ಲಿ “ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ” ದಿನಾಂಕ 15-09-2024 ರಂದು ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಲಾದ “ಬೃಹತ್ ರಕ್ತದಾನ ಶಿಬಿರ” ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು ಶುಭಹಾರೈಸಿದರು. ಈ ಸಂದರ್ಭದಲ್ಲಿ ಶೇಖರ್ ಶೆಟ್ಟಿಗೌರವಾಧ್ಯಕ್ಷರು ಹಿಂದೂಯುವಸೇನೆ ಉಡುಪಿ, ಅಜಿತ್ ಕೊಡವೂರ್ ಜಿಲ್ಲಾಧ್ಯಕ್ಷರು ಹಿಂದೂಯುವಸೇನೆ ಉಡುಪಿ, ಡಾ ವೀಣಾ ಕುಮಾರಿ ರಕ್ತನಿಧಿ ವಿಭಾಗ ಜಿಲ್ಲಾಸ್ಪತ್ರೆ ಉಡುಪಿ, ಸುನಿಲ್
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ದಿನಾಂಕ 15-09-2024 ರಂದು “ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ” ಪ್ರಯುಕ್ತ ನಡೆದ “ಮಾನವ ಸರಪಳಿ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.