News & Media
ಶಿರ್ವ ಭಾಗದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿ ಸಭೆ
ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು ಶಿರ್ವ ಭಾಗದ ಕಾರ್ಯಕರ್ತರೊಂದಿಗೆ ದಿನಾಂಕ 12-09-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಶಿರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ರಾವ್, ಶಕ್ತಿ
ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿ ಸಭೆ
ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕು ಹಾಗೂ ಪುರಸಭೆ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು ದಿನಾಂಕ 10-09-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಸಂಚಾಲಕರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು. ಶಾಸಕರು ಮಾತನಾಡಿ ಪ್ರತಿ ಬೂತ್ನಲ್ಲಿ ಗರಿಷ್ಠ ಸದಸ್ಯತ್ವ ನೋಂದಣಿ ಮಾಡುವಂತೆ ಸಂಚಾಲಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ
ಸದಸ್ಯತ್ವದ ಅಭಿಯಾನದ ಸಂಚಾಲಕರೊಂದಿಗೆ ಸಭೆ
ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ಭಾಗದ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ಅಭಿಯಾನದ ಸಂಚಾಲಕರೊಂದಿಗೆ ದಿನಾಂಕ 10-09-2024 ರಂದು ಹಿರಿಯಡಕ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಸಂಚಾಲಕರು ತಮಗೆ ಜವಾಬ್ದಾರಿ ನೀಡಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗರಿಷ್ಠ ಸದಸ್ಯತ್ವ ನೋಂದಣಿ ಆಗುವಂತೆ ನೋಡಿಕೊಳ್ಳಿ ಎಂದು ಸಭೆಯಲ್ಲಿ ತಿಳಿಸಲಾಯಿತು.
ಪಿಲಾರು ಸಾಂತೂರು ಜವನೆರ್ ರಿ. ಮುದರಂಗಡಿ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಸಮಾರಂಭ
ಪಿಲಾರು-ಸಾಂತೂರು ಜವನೆರ್ ಮುದರಂಗಡಿ (ರಿ.) ವತಿಯಿಂದ ಆಸುಪಾಸಿನ ಜನಗರಿಗೆ ತುರ್ತು ಸಂದರ್ಭದಲ್ಲಿ ಉಪಯೋಗವಾಗುವ ನಿಟ್ಟಿನಲ್ಲಿ “ವಿಶ್ವ ಶಾಂತಿ” ಜೀವ ರಕ್ಷಕ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದು, ದಿನಾಂಕ 08-09-2024 ರಂದು ನಡೆದ ಇದರ ಲೋಕಾರ್ಪಣಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಪಿಲಾರು – ಸಾಂತೂರು ಜವನೆರ್ ಮುದರಂಗಡಿ ರಿ ಅಧ್ಯಕ್ಷರಾದ ಪ್ರತೀಕ್ ಸಿ ಹೆಗ್ಡೆ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ, ಉಪಾಧ್ಯಕ್ಷರಾದ ಮೋಹಿನಿ ಸಿ ಹೆಗ್ಡೆ, ರಾಷ್ಟ್ರೀಯ ಬಿಲ್ಲವ
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ದಿನಾಂಕ 07-09-2024 ರಂದು ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸಾಂಕೇತಿಕವಾಗಿ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿ ವಿಧ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರೇಶ್ಮಾ
ಶಿಕ್ಷಕರ ದಿನಾಚರಣೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ
ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಉಡುಪಿ, ಆದರ್ಶ ಕಾಲೇಜ್ ಆಫ್ ನರ್ಸಿಂಗ್, ಆದರ್ಶ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಆದರ್ಶ ಪ್ಯಾರಮೆಡಿಕಲ್ ಕಾಲೇಜು ಆದರ್ಶ ಆಸ್ಪತ್ರೆ, ಉಡುಪಿ ಮತ್ತು ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ದಿನಾಂಕ 06-09-2024 ರಂದು ಅಲೆವೂರು ಆದರ್ಶ ಸಮೂಹ ವಿದ್ಯಾಸಂಸ್ಥೆಗಳ ಸಂಕೀರ್ಣದಲ್ಲಿ ಆಯೋಜಿಸಲಾದ ಡಾ|| ಎಸ್. ರಾಧಾಕೃಷ್ಣನ್‌ರವರ ಜನ್ಮಜಯಂತಿ ಹಾಗೂ ಉಡುಪಿ ಜಿಲ್ಲಾ ಮಟ್ಟದ “ಶಿಕ್ಷಕರ ದಿನಾಚರಣೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ” ಕಾರ್ಯಕ್ರಮದಲ್ಲಿ ಮುಖ್ಯ
ಉಡುಪಿ ವಲಯ ಮಟ್ಟದ ಶಿಕ್ಷಕರ ದಿನಾಚರಣೆ
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಉಡುಪಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉಡುಪಿ ವಲಯ ಮತ್ತು ಡಾ. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಇವರ ಸಹಯೋಗದೊಂದಿಗೆ ದಿನಾಂಕ 05-09-2024 ರಂದು ಕಿದಿಯೂರು ಹೋಟೆಲ್ ಶೇಷಶಯನ ಹಾಲ್ನಲ್ಲಿ ಆಯೋಜಿಸಲಾದ “ಡಾ. ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಉಡುಪಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ – 2024” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ
ಡಿ. ದೇವರಾಜ್ ಅರಸು ಅಭಿವೃದ್ಧಿ ನಿಗಮದಡಿ 31 ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ ವಿತರಣೆ
ಕಾಪು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ ವತಿಯಿಂದ ಮಂಜೂರಾದ ಉಚಿತ ಹೋಲಿಗೆ ಯಂತ್ರವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದಿನಾಂಕ 04-09-2024 ರಂದು ಕಾಪು ಪುರಸಭೆಯ ಸಭಾಂಗಣದಲ್ಲಿ ವಿತರಿಸಿದರು. ಕಾಪು ತಾಲೂಕು ವ್ಯಾಪ್ತಿಯ 31 ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ತಾಲೂಕು ಆಡಳಿತಾಧಿಕಾರಿಗಳಾದ ಪೂರ್ಣಿಮಾ, ಕಾಪು ತಹಶೀಲ್ದಾರರಾದ
ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ
ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಿರ್ವಹಣಾ ಸಮಿತಿ ಸಭೆ ದಿನಾಂಕ 04-09-2024 ರಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಬ್ಲೂ ಫ್ಲಾಗ್ ಬೀಚ್ನಲ್ಲಿ ಸುರಕ್ಷತಾ ದೃಷ್ಟಿಯಿಂದ ಸಿ.ಸಿ ಕ್ಯಾಮರಾ ಅಳವಡಿಕೆ ಬಗ್ಗೆ ಬೀಚ್ ಸಂಪರ್ಕ ರಸ್ತೆ ಅಭಿವೃದ್ಧಿಗೊಳಿಸುವ ಬಗ್ಗೆ ಮತ್ತು ಬೀಚ್ನಲ್ಲಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆ ಆರಂಭಿಸುವ ಬಗ್ಗೆ ಮತ್ತು ಬೀಚ್ ಉತ್ಸವ ಹಾಗೂ ಫುಡ್ ಫೆಸ್ಟಿವಲ್
ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ
ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ದಿನಾಂಕ 04-09-2024 ರಂದು ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಭಾರಿ ಸುರಿದ ಮಳೆಯಿಂದ ಹಾನಿಗೀಡಾದ ಕೃಷಿ ಬೆಳೆಗಳಿಗೆ ಹೆಕ್ಟೇರ್ ವಾರು ಪರಿಹಾರವನ್ನು ನೀಡಿದ ವರದಿಯನ್ನು ನೀಡುವಂತೆ ಮತ್ತು ರೈತರಿಗೆ ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಪೂರೈಕೆಯಾಗುವಂತ ಸಲಕರಣೆಗಳ ಮಾಹಿತಿಯನ್ನು ಪಂಚಾಯತ್ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಫಲಾನುಭವಿಗಳಿಗೆ ಕೃಷಿ ಇಲಾಖೆಯ ಬೇಡಿಕೆ ಆಧಾರಿತ ಸಲಕರಣೆಗಳನ್ನು ಒದಗಿಸಲು ಕ್ರಮ