News & Media
15 ಜುಲೈ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವನಮಹೋತ್ಸವ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಳತ್ತೂರು, ಅರಣ್ಯ ಇಲಾಖೆ, ಕಳತ್ತೂರು ಗ್ರಾಮ ಪಂಚಾಯತ್, ಧರಣಿ ಸಮಾಜ ಸೇವಾ ಸಂಘ, ಕಾಪು ಇವರ ಜಂಟಿ ಸಹಯೋಗದೊಂದಿಗೆ ದಿನಾಂಕ 15-07-2023 ರಂದು ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ “ವನಮಹೋತ್ಸವ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ
ಸದನದಲ್ಲಿ ಮೀನುಗಾರರ ಸಂಕಷ್ಟ, ದೈವ ದೇವಸ್ಥಾನಗಳ ಪುನರುತ್ಥಾನ ಕುರಿತು ಪ್ರಸ್ತಾಪ
ಸದನದಲ್ಲಿ ಇಂದು ಮೀನುಗಾರರ ಸಂಕಷ್ಟ, ಅಧಿಕಾರಿ ಜನಪ್ರತಿನಿಧಿಗಳ ಹಸ್ತಕ್ಷೇಪ, ದೈವ ದೇವಸ್ಥಾನಗಳ ಪುನರುತ್ಥಾನ, ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕುರಿತು ಶಾಸಕರು ಪ್ರಸ್ತಾಪಿಸಿದರು. ಕರಾವಳಿ ಭಾಗದಲ್ಲಿ ವಿಪರೀತ ಮಳೆಯಿಂದ ಹಾಗೂ ಕಡಲ ಕೊರೆತದಿಂದಾಗಿ ಸಾರ್ವಜನಿಕರ ಆಸ್ತಿಪಾಸ್ತಿ, ಮನೆಗಳು ಹಾನಿಯಾಗಿದ್ದು ಬಡ ಮೀನುಗಾರರು ಹಾಗೂ ಸಾರ್ವಜನಿಕರು ಸಂಕಷ್ಟಕೊಳಗಾಗಿರುತ್ತಾರೆ. ಕಡಲ ಕೊರೆತ ಭಾದಿತ ಪ್ರದೇಶದಲ್ಲಿ ಶಾಶ್ವತ ಪರಿಹಾರ ಹಾಗೂ ಆಸ್ತಿಪಾಸ್ತಿಗಳಿಗೆ ಪರಿಹಾರ ನೀಡುವಂತೆ ಅಧಿಕಾರಿಗಳಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಪ್ರಸ್ತಾಪಿಸಿದರೆ ಅನುದಾನದ ಕೊರತೆ ಇದೆ ಎಂಬ ಉತ್ತರ ನೀಡಿರುತ್ತಾರೆ. ಈ ಬಗ್ಗೆ
ಜೈನ ಮುನಿಗಳ ಅಮಾನುಷ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿಗಳ ಅಮಾನುಷ ಹತ್ಯೆ ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಕಾನೂನು ವೈಫಲ್ಯದ ವಿರುದ್ಧ ದಿನಾಂಕ 12-07-2023 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಜೈನ ಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ರಾಜ್ಯಪಾಲರಿಗೆ ಮನವಿ ನೀಡಲಾಯಿತು. Media Reports 12-07-2023
9 ಜುಲೈ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆ ಅಭಿಯಾನ ಅಂಗವಾಗಿ ದೀಕ್ಷಾ ದೀಪ ಪ್ರಜ್ವಲನ ಕಾರ್ಯಕ್ರಮ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ “ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆ ಅಭಿಯಾನ” ಜುಲೈ 9 ರಿಂದ ಅಕ್ಟೋಬರ್ 15 ರ ವರೆಗೆ ನಡೆಯಲಿದ್ದು, ಈ ಸಲುವಾಗಿ ಇಂದು ದಿನಾಂಕ 09-07-2023 ರಂದು ನಡೆದ “ದೀಕ್ಷಾ ದೀಪ ಪ್ರಜ್ವಲನ ಕಾರ್ಯಕ್ರಮಕ್ಕೆ” ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಕೊಂಬಗುಡ್ಡೆ ಮಲ್ಲಾರು
8 ಜುಲೈ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಹಿರಿಯಡಕ ಕಾಲೇಜು ವಾರ್ಷಿಕೋತ್ಸವ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ “ಕಾಲೇಜು ವಾರ್ಷಿಕೋತ್ಸವ – 2022-23” ಸಮಾರಂಭದಲ್ಲಿ ದಿನಾಂಕ 08-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪು ಕಾಲೇಜು ವಾರ್ಷಿಕೋತ್ಸವ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕಾಪು ಇದರ “ಕಾಲೇಜು ವಾರ್ಷಿಕೋತ್ಸವ – 2023” ಸಮಾರಂಭದಲ್ಲಿ ದಿನಾಂಕ 08-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ
ಕರಾವಳಿಯಲ್ಲಿ ನೆರೆ ಹಾವಳಿ ಕಡಲ ಕೊರೆತ ಕುರಿತು ಮನವಿ
ಕರಾವಳಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದ್ದು ಅಲ್ಲಲ್ಲಿ ನೆರೆ ಹಾವಳಿ ಕಡಲ ಕೊರೆತ ಉಂಟಾಗುತ್ತಿರುವುದರ ಬಗ್ಗೆ ಮಾಹಿತಿ ಇದೆ. ಬಜೆಟ್ ಅಧಿವೇಶನದ ಸಲುವಾಗಿ ನಾನು ಬೆಂಗಳೂರಿನಲ್ಲಿ ಇರುವುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸೂಚಿಸಲಾಗಿದ್ದು ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಲಾಗಿದೆ. ಕಡಲ ಕೊರೆತದ ಬಗ್ಗೆ ಸಂಬಂಧಿಸಿದ ಮಂತ್ರಿಗಳೊಂದಿಗೂ ಚರ್ಚಿಸಿದ್ದೇನೆ. ಜನರು ತಮ್ಮ ಮಕ್ಕಳೊಂದಿಗೆ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಬೃಹತ್ ಧರಣಿ ಸತ್ಯಾಗ್ರಹ
ಚುನಾವಣೆಯ ಸಂದರ್ಭದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಕರ್ನಾಟಕ ರಾಜ್ಯದ ಜನತೆಯನ್ನು ನಂಬಿಸಿ ಅಧಿಕಾರಕ್ಕೆ ಬಂದ ನಂತರ ಉಚಿತ ಯೋಜನೆಗಳನ್ನು ನೀಡುವಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ನಾಡಿನ ಜನತೆಗೆ ವಂಚಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ “ಬೃಹತ್ ಧರಣಿ ಸತ್ಯಾಗ್ರಹ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
30 ಜೂನ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಕೊರಂಗ್ರಪಾಡಿ ವಸತಿ ನಿವೇಶನದಲ್ಲಿ ವನಮಹೋತ್ಸವ ಕಾರ್ಯಕ್ರಮ ಕರ್ನಾಟಕ ಅರಣ್ಯ ಇಲಾಖೆ ಉಡುಪಿ ವಲಯ ಕುಂದಾಪುರ ವಿಭಾಗ, ಕರ್ನಾಟಕ ಗೃಹ ಮಂಡಳಿ, ಉಡುಪಿ, ತ್ರಿಷಾ ಕಾಲೇಜು, ಕಟಪಾಡಿ ಇವರ ಸಹಯೋಗದೊಂದಿಗೆ ದಿನಾಂಕ 30-06-2023 ರಂದು ಕರ್ನಾಟಕ ಗೃಹ ಮಂಡಳಿ ವಸತಿ ನಿವೇಶನ ಕೊರಂಗ್ರಪಾಡಿಯಲ್ಲಿ ಆಯೋಜಿಸಿದ “ವನಮಹೋತ್ಸವ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪಾ, ಸದಸ್ಯರಾದ ಲಿವಿತಾ ದೇಸಿ,
29 ಜೂನ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ದಿನಾಂಕ 29-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಉಚಿತ ಪುಸ್ತಕ ವಿತರಣೆ ಮಾಡಿದ ಶಾಸಕರು ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ,
25 ಜೂನ್ 2023 ರಂದು ಕ್ಷೇತ್ರದ ವಿವಿಧೆಡೆಗಳಲ್ಲಿ ನಡೆದ ಕಾರ್ಯಕ್ರಮಗಳು
ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸಭೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಬಡಾಗ್ರಾಮ ಉಚ್ಚಿಲ ಇದರ ಜೀರ್ಣೋದ್ಧಾರ ಸಮಿತಿ ಸಭೆಯಲ್ಲಿ ಇಂದು ದಿನಾಂಕ 25-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಹಿರಿಯರಾದ ಅಶೋಕ್ ರಾಜ್ ಎರ್ಮಾಳು ಬೀಡು, ವೆಂಕಟೇಶ ನಾವಡ, ಸತೀಶ್ ಶೆಟ್ಟಿ ಅನ್ನಾವರ, ಗಂಗಾಧರ ಸುವರ್ಣ, ಸುಧೀರ್ ಹೆಗ್ಡೆ, ಚಂದ್ರಶೇಖರ, ಪ್ರಧಾನ ಅರ್ಚಕರಾದ ಗೋವಿಂದ ರಾಜ ಭಟ್ ಹಾಗೂ